
ದೊಡ್ಡಬಳ್ಳಾಪುರ: ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಭಾರತೀಯ ಜನತಾಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಕಿರಣ್, ಶಾಲಾ- ಕಾಲೇಜುಗಳು ಪ್ರಾರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಹಾಗೂ ಲಾಕ್ ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಿಗೆ ಇನ್ನು ಪ್ರಾರಂಭವಾಗಿಲ್ಲ ಇದರಿಂದ ರಾಜ್ಯದ ಗ್ರಾಮೀಣ ಪ್ರದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ,ಸಾರಿಗೆ ಇಲಾಖೆಯು ತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಪ್ರಾರಂಭಿಸಬೇಕೆಂದರು.
ಈ ವೇಳೆ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ನಾಗಸಂದ್ರ, ಚಂದನ್, ಉಪಾಧ್ಯಕ್ಷ ಗೋವಿಂದ ರಾಜು ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……