ಬೆಂ.ಗ್ರಾ.ಜಿಲ್ಲೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆ ವತಿಯಿಂದ 2021-22ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಇಚ್ಛಿಸುವ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪಂಗಡದ ಹಾಗೂ ಸಣ್ಣ, ಅತಿ ಸಣ್ಣ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ನಿಗದಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರ ಮೂರು ಹೆಕ್ಟೇರ್‌ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು(ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). 

ಈ ಯೋಜನೆಯಡಿ ಸೌಲಭ್ಯವನ್ನು ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ ಮತ್ತು ಇತರೆ ವರ್ಗದ ರೈತರಿಗೆ ಶೇ. 45 ರಷ್ಟು ಸಹಾಯಧನವನ್ನು ಗರಿಷ್ಠ 5 ಹೆಕ್ಟೇರ್ ವರೆಗೂ ಸಹಾಯಧನ ನೀಡಲಾಗುವುದು.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತರಾಗಿದ್ದಲ್ಲಿ, ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ, ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ), ದೊಡ್ಡಬಳ್ಳಾಪುರ ತಾಲ್ಲೂಕು  ದೂ.ಸಂ.: 080-27623770, ಮೊ.ಸಂ.: 9632410677, ದೇವನಹಳ್ಳಿ ತಾಲ್ಲೂಕು ದೂ.ಸಂ.: 080-27681204, ಮೊ.ಸಂ.:9448825101, ಹೊಸಕೋಟೆ ತಾಲ್ಲೂಕು ದೂ.ಸಂ.: 080-27904760, ಮೊ.ಸಂ.: 9538953949 ಹಾಗೂ ನೆಲಮಂಗಲ ತಾಲ್ಲೂಕು ದೂ.ಸಂ.: 080-27726213, ಮೊ.ಸಂ.: 9901754339 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!