ಅಸಂಘಟಿತ ವಲಯದ ಸೌಲಭ್ಯಗಳನ್ನು ಪಡೆದುಕೊಳ್ಳಲು ನೋಂದಣಿ ಅಗತ್ಯ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆ. ಅಸಂಘಟಿತ ಕಾರ್ಮಿಕರಿಗೆ ನೀಡುವ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕರು ಸರ್ಕಾರ ದತ್ತಾಂಶದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್.ನಾಗೇಂದ್ರ ತಿಳಿಸಿದರು.

ನಗರದ ಬೆಸ್ತರಪೇಟೆಯಲ್ಲಿ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್‍ನ ದೊಡ್ಡಬಳ್ಳಾಪುರ ಕ್ಷೇತ್ರ ಸಮಿತಿಯ ಕಾರ್ಯಾಲಯದ ಉದ್ಘಾಟನೆ, ಸಂಘದ ಸದಸ್ಯರಿಗೆ ಗುರುತಿನ ಚೀಟಿ ಹಾಗೂ ಇ-ಶ್ರಮ್ ಚೀಟಿಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಮಿಕರ ವಿಮಾ, ಭವಿಷ್ಯ ನಿಧಿ ಸೌಲಭ್ಯ ಹೊಂದಿರದ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಲಾಗುತ್ತಿದ್ದು, ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕೊವಿಡ್ ಸಂದರ್ಭದಲ್ಲಿ 12 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಇದರಲ್ಲಿ ಟೈಲರ್ಸ್‍ಗಳ ಅರ್ಜಿಗಳ ಹೆಚ್ಚಿನ ಪ್ರಮಾಣದಲ್ಲಿವೆ. 18ರಿಂದ 59 ವರ್ಷದೊಳಗಿನ ಅರ್ಹರು ಆಧಾರ್, ಬ್ಯಾಂಕ್ ಪಾಸ್‍ಬುಕ್, ಉದ್ಯೋಗದ ದಾಖಲಾತಿಗಳನ್ನು ನೀಡಬೇಕಿದೆ.

ಕೇಂದ್ರ ಸರ್ಕಾರದ ಇ-ಶ್ರಮ್ ಯೋಜನೆಯಲ್ಲಿ ನೋಂದಾಯಿಸದವರಿಗೆ ಸರ್ಕಾರದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗಲಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತದಲ್ಲಿ ಟೈಲರ್ಸ್‍ಗಳು ಸೇರಿದಂತೆ 11 ಅಸಂಘಟಿತ ವಲಯಗಳಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು, ಇದು ಸರ್ಕಾರದ ಯಾವುದೇ ನೆರವುಗಳಿಗೆ ಅನುಕೂಲವಾಗಲಿದೆ.  ಸಂಘಗಳು ತಮ್ಮ ವ್ಯಾಪ್ತಿಯ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಸಿಗಲು ಸಹಕರಿಸಬೇಕೆಂದರು.

ಸಂಘದ ತಾಲೂಕು ಅಧ್ಯಕ್ಷ ಕೆ.ಎಸ್.ಚಂದ್ರು ಮಾತನಾಡಿ, ಕೊವಿಡ್ ಸಂದರ್ಭದಲ್ಲಿ ಟೈಲರ್ಸ್‍ಗಳು ತೀವ್ರ ಸಂಕಷ್ಟದಲ್ಲಿದ್ದರು. ಈ ವೇಳೆ ಸರ್ಕಾರ ನೀಡಿದ ಸಹಾಯಧನ ಬಹಳಷ್ಟು ಜನರಿಗೆ ತಲುಪಲಿಲ್ಲ. ಸಂಘದ ಸದಸ್ಯರು ಸರ್ಕಾರದ ನಿಯಮಗಳಂತೆ ತಮ್ಮ ವೃತ್ತಿಯ ಗುರುತಿನ ಚೀಟಿ ಪಡೆದುಕೊಂಡು, ಸೌಲಭ್ಯಗಳನ್ನು ಪಡೆಯಬೇಕು. ಕಾರ್ಮಿಕ ಇಲಾಖೆಯ ಅಕಾರಿಗಳು ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ  ದೊಡ್ಡಬಳ್ಳಾಪುರ  ವೃತ್ತದ ಕಾರ್ಮಿಕ ನಿರೀಕ್ಷಕ ಎಂ.ಪ್ರದೀಪ್, ಮುಖಂಡರಾದ ಚಂದ್ರು, ಸಂಘದ ಉಪಾಧ್ಯಕ್ಷ ರಾದ ಅನ್ವರ್ ಖಾನ್, ಟಿ.ಎಚ್.ಮುನಿಯಪ್ಪ, ಎಸ್.ಲೀಲಾವತಿ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ವಾಮನ್ ರಾವ್, ಖಜಾಂಚಿ ಜಯಣ್ಣ, ಕಾರ್ಯದರ್ಶಿಗಳಾದ ಎಂ.ವಸಂತ ಕುಮಾರಿ, ಮದನ ಕುಮಾರ್, ಅಮರನಾರಾಯಣಾಚಾರ್, ಬಿ.ಎನ್.ಉಷಾ ಮತ್ತಿತರರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!