ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಒಂದು ವರದಾನ: ಡಾ.ಎಂ.ಚಿಕ್ಕಣ್ಣ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಒಂದು ವರದಾನವಾಗಲಿದೆ ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಅಭಿಪ್ರಾಯಪಟ್ಟರು.

ನಗರದ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020 ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಾಕಷ್ಟು ಜಾಗರೂಕತೆಯಿಂದ ತಮಗೆ ಆಸಕ್ತಿಯಿರುವ ಡಿಸಿಪ್ಲಿನ್ ಕೋರ್ ಮತ್ತು ಉಪಯುಕ್ತ ಓಪನ್ ಇಲೆಕ್ಟಿವ್ ತೆಗೆದುಕೊಂಡರೆ ಅವರು ಉದ್ದೇಶಿತ ವಿಷಯದಲ್ಲಿ ಪದವಿಯಾಗಲಿ ಆನರ್ಸ್ ಆಗಲಿ ಪಡೆದು ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅನುಕೂಲವಾಗುತ್ತದೆ ಎಂದರು.

ಉಪನ್ಯಾಸ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪಿ.ಚೈತ್ರ ಮಾತನಾಡಿ, ವಿದ್ಯಾರ್ಥಿಗಳು ಕೋರ್ಸುಗಳನ್ನು ಆಯ್ಕೆ ಮಾಡುವಾಗ ಸಾಕಷ್ಟು ಮುಂದಾಲೋಚನೆ ಮಾಡಿಕೊಳ್ಳುವುದು ಅಗತ್ಯ. ಒಂದು ವಿಷಯವನ್ನು ಕಲಿಯಲು ಸುಲಭ ಅಥವಾ ಅಂಕಗಳಿಸುವುದು ಸುಲಭವೆಂಬ ಕಾರಣದಿಂದ ಆ ವಿಷಯವನ್ನು ಆಯ್ಕೆ ಮಾಡಿಕೊಂಡರೆ ಮುಂದಿನ ಹಂತದಲ್ಲಿ ತೊಂದರೆಯಾಗಬಹುದಾದ ಸಾಧ್ಯತೆ ಇರುತ್ತದೆ ಎಂದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಕೆ.ದಕ್ಷಿಣ ಮೂರ್ತಿ ಅವರು ಮಾತನಾಡಿ,  ಕನ್ನಡ, ಶಾರೀರಿಕ ಶಿಕ್ಷಣ, ಡಿಜಿಟಲ್ ಫ್ಲುಯೆನ್ಸಿ ಮೊದಲಾದ ವಿಷಯಗಳನ್ನು ಕಡ್ಡಾಯಗೊಳಿಸಿರುವುದರಿಂದ ಆ ವಿಷಯಗಳನ್ನು ಬೋಧಿಸುವ ಉಪನ್ಯಾಸಕರಿಗೆ ಬೇಡಿಕೆ ಜಾಸ್ತಿಯಾಗಬಹುದು ಎಂದರು.

ಕಾರ್ಯಕ್ರಮದಲ್ಲಿ ಇತಿಹಾಸದ ಪ್ರಾಧ್ಯಾಪಕ ಬಿ.ಶ್ರೀನಿವಾಸ್, ಕನ್ನಡ ವಿಭಾಗದ ಪ್ರಾಧ್ಯಾಪಕ ರವಿಕುಮಾರ್, ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಲಕ್ಷ್ಮೀಶ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರ: ರಾಂಪುರ MPCSಗೆ ಅವಿರೋಧ ಆಯ್ಕೆ.‌.!

ದೊಡ್ಡಬಳ್ಳಾಪುರ: ರಾಂಪುರ MPCSಗೆ ಅವಿರೋಧ ಆಯ್ಕೆ.‌.!

ದೊಡ್ಡಬಳ್ಳಾಪುರ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.

[ccc_my_favorite_select_button post_id="119927"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!