ಚಾಮರಾಜನಗರ: ನಟ ಪುನೀತ್ ರಾಜ್ ಕುಮಾರ್ ಅವರ ನಿಧನ ವಿಷಯ ಕೇಳಿ ಅಭಿಮಾನಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಮುನಿಯಪ್ಪ(29ವರ್ಷ) ಎನ್ನಲಾಗಿದ್ದು, ಇವರು ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಪುನೀತ್ ಸಾವಿನ ವಿಷಯ ಕೇಳುತ್ತಲೇ ಮುನಿಯಪ್ಪ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಿದರೂ, ಅವರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತ ಮುನಿಯಪ್ಪ ಪುನೀತ್ ರಾಜ್‍ಕುಮಾರ್ ಅವರ ಪ್ರತಿಯೊಂದು ಚಿತ್ರವನ್ನು ತಪ್ಪದೆ ನೋಡುತ್ತಿದ್ದರು. ಅಲ್ಲದೇ ಆಗಾಗ್ಗೆ ಬೆಂಗಳೂರಿಗೆ ತೆರಳಿ ನೆಚ್ಚಿನ ನಟನನ್ನು ಭೇಟಿಯಾಗುತ್ತಿದ್ದರಂತೆ. ಮೃತ ಪುನೀತ್ ಅಭಿಮಾನಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ನಾಳೆ ಮರೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……