ದೊಡ್ಡಬಳ್ಳಾಪುರ: 47 ವರ್ಷದ ಸ್ಯಾಂಡಲ್ ವುಡ್ ನ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಬೆಳಗ್ಗೆ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಪತ್ನಿ ಅಶ್ವಿನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು, ನಟರು-ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಪುನೀತ್ ರಾಜ್‍ಕುಮಾರ್ ಅಗಲಿಕೆ ವಿಷಯ ತಾಲೂಕಿನಾಧ್ಯಂತ ಮಿಂಚಿನಂತೆ ಹರಡಿದ್ದು, ನಗರದಾದ್ಯಂತ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಂಚಿ ಸ್ವಯಂ ಪ್ರೇರಿತ ಬಂದ್ ವಾತಾವರಣ ಕಂಡುಬರುತ್ತಿದೆ.
ಇನ್ನೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೂಬಸ್ತ್ ಕೈಗೊಳ್ಳಲಾಗಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಇನ್ಸ್‌ಪೆಕ್ಟರ್ ಸತೀಶ್ ವಿವಿಧ ಸಂಘಟನೆಯ ಮುಖಂಡರೊಂದಿಗೆ ಮಾತುಕತೆ ನಡೆಸಿದರು.
ಪ್ರಸ್ತುತ ನಗರ ಡಾ.ರಾಜ್ ಕುಮಾರ್ ಪ್ರತಿಮೆ ಬಳಿ ಶ್ರದ್ಧಾಂಜಲಿ ಸಭೆ ನಡೆಸಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……