ರಸ್ತೆ ಅಪಘಾತಗಳು ಸಂಭವಿಸದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ಬೆಂ ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿರುವ ರಸ್ತೆಗಳ ಸ್ಥಿತಿ ಹದಗೆಟ್ಟಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ಈ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಸುಧಾರಿತ ರಸ್ತೆಗಳನ್ನಾಗಿ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹದಗೆಟ್ಟಿರುವ ರಸ್ತೆಗಳ ದುರಸ್ತಿ  ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ತಿಳಿಸಿದರು.

ಟೋಲ್‌ಗಳಲ್ಲಿ ವಿಐಪಿ  ವಾಹನಗಳು ಚಲಿಸುವ ಮಾರ್ಗಗಳಿಗೆ ಸ್ಥಳಾವಕಾಶ ಮಾಡಿಕೊಡಿ ಎಂದರಲ್ಲದೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ದುರಸ್ತೀಕರಣ, ರಸ್ತೆ ದೀಪಗಳ ಸರಿಯಾದ ಅಳವಡಿಕೆ, ರಸ್ತೆ ಬದಿಯ ಅನಗತ್ಯ ಅಂಗಡಿ ಮುಂಗಟ್ಟಗಳ ತೆರವು, ಸೂಕ್ತ ಏಕಮುಖ(ಒನ್ ವೇ) ರಸ್ತೆಗಳ‌ ರಚನೆ‌, ರೋಡ್ ಮಾರ್ಕಿಂಗ್ ಹಾಗೂ ಮುಂತಾದ ಸಮಸ್ಯೆಗಳ  ಕುರಿತಂತೆ ಸಾರಿಗೆ, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ರಸ್ತೆಗಳಲ್ಲಿ ಬೈಕ್ ವೀಲಿಂಗ್ ಮಾಡುವ ವ್ಯಕ್ತಿಗಳನ್ನು ಗುರುತಿಸಲು ಸಿಸಿಟಿವಿ ಅಳವಡಿಸಿ ಹಾಗೂ ಅಂತಹವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದರಲ್ಲದೆ, ಹೊಸಕೋಟೆ ವಲಯದಲ್ಲಿ ಈಗಾಗಲೇ ಸಿಸಿಟಿವಿ ಅಳವಡಿಸಲಾಗಿದ್ದು, ಉಳಿದ ತಾಲ್ಲೂಕುಗಳಲ್ಲಿ‌ಯೂ ಸಿಸಿಟಿವಿ ಅಳವಡಿಸಲು ಸೂಚಿಸಿದರು.

ರಸ್ತೆಯ ಸಿಗ್ನಲ್‌ಗಳಲ್ಲಿ ಕಂಡುಬರುವ ಬ್ಲಿಂಕರ್ಸ್‌ಗಳ ತೀವ್ರತೆಯನ್ನು ಕಡಿಮೆಗೊಳಿಸಲು ರೇಡಿಯಂಗಳನ್ನು ಅಳವಡಿಸಬೇಕು ಹಾಗೂ ಟ್ರಕ್ ಟರ್ಮಿನಲ್ ನಿರ್ಮಿಸಿ, ಅವೈಜ್ಞಾನಿಕ ರಸ್ತೆ ಹಂಪ್ಸ್‌ಗಳನ್ನು ತೆರವುಗೊಳಿಸಲು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಅವರು ಮಾತನಾಡಿ ರಸ್ತೆ ಅಪಘಾತ ಸಂಭವಿಸಿದರೆ  ಅವರ ಸಾವಿನಿಂದ ಇಡೀ  ಕುಟುಂಬದವರೇ ನೋವು ಅನುಭವಿಸಬೇಕಾಗುತ್ತದೆ, ಅಪಘಾತದಿಂದ ಅಂಗವಿಕಲನಾದರೆ ಅವರನ್ನು ನೋಡಿಕೊಳ್ಳುವ ಹೊಣೆ ಕುಟುಂಬದವರಿಗೆ ಬಹಳ ಕಠಿಣವಾಗಿರುತ್ತದೆ ಎಂದರು.

ನೆಲಮಂಗಲದಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಗುರುತಿಸಿದ್ದು, ಅವುಗಳ ಸುಸ್ಥಿತಿಗೆ ಕ್ರಮವಹಿಸಿ, ತಾತ್ಕಾಲಿಕ ವ್ಯವಸ್ಥೆಗಳಿಗಿಂತ ಶಾಶ್ವತ ಪರಿಹಾರದ ಕಡೆ ಗಮನವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ರಸ್ತೆಯ ಸುರಕ್ಷಿತ ನಿಯಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ  ವಿಜಯಾ.ಈ.ರವಿಕುಮಾರ್ ಅವರು ಮಾತನಾಡಿ, ಶಾಲೆಗಳು ಪ್ರಾರಂಭವಾಗುತ್ತಿದ್ದು, ಶಾಲೆಗಳ ಸುತ್ತಮುತ್ತಲಿನ ಅವೈಜ್ಞಾನಿಕ ಹಂಪ್ಸ್‌ಗಳನ್ನು ತೆರವುಗೊಳಿಸಿ ಹಾಗೂ ಶಾಲಾ-ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತಂತೆ ಕಾರ್ಯಗಾರಗಳನ್ನು ನಡೆಸುವ ಮೂಲಕ ಅರಿವು ಮೂಡಿಸಬೇಕೆಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ನಟರಾಜ್, ನೆಲಮಂಗಲ ಡಿವೈಎಸ್ಪಿ ಜಗದೀಶ್, ನಗರ ಮತ್ತು ಗ್ರಾಮಾಂತರ ಯೋಜನಾ ಉಪ ನಿರ್ದೇಶಕ ಬಿ.ಆರ್.ಹರ್ಷ, ನೆಲಮಂಗಲ ಪಿಡಬ್ಲ್ಯೂಡಿ ಅಧಿಕಾರಿ ನಟರಾಜ್, ಕಾರ್ಯಪಾಲಕ ಅಭಿಯಂತರ ಯತೀಶ್‌ರಾಜ್, ಕೋಲಾರದ ಎಲ್.ಇ.ಎ. ಅಸೋಸಿಯೇಟ್ ಸೌತ್ ಪ್ರೈವೇಟ್ ಲಿಮಿಟೆಡ್ ಸಂದೀಪ್ ಕುಮಾರ್, ಎನ್.ಹೆಚ್.ಎ.ಐ. ಯೋಜನಾ‌ ನಿರ್ದೇಶಕ ಶ್ರೀನಿವಾಸ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!