ದೊಡ್ಡಬಳ್ಳಾಪುರ: ಚಾಮರಾಜನಗರದಲ್ಲಿ ನಡೆದ ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದ ಘಟನೆಗಳು ಮರುಕಳಿಸದಂತೆ ಆಮ್ಲಜನಕದ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಒತ್ತು ನೀಡುತ್ತಿರುವುದು ಅಭಿನಂದನೀಯವಾಗಿದ್ದು, ಕಂಪನಿಗಳು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ಕೈಜೋಡಿಸಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಲ್ ಟೆಕ್ನಾಲಜಿಸ್ ವತಿಯಿಂದ ನಿರ್ಮಿಸಲಾಗಿರುವ ಆಮ್ಲಜನಕ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಪರಿಸ್ಥಿತಿಯಲ್ಲಿ ಆಮ್ಲಜನಕದ ಸರಬರಾಜು ಮಾಡುವುದು ದೊಡ್ಡ ಸವಾಲಾಗಿತ್ತು. ಚಾಮರಾಜನಗರದಲ್ಲಿ ನಡೆದ ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದರು. ಆದರೆ ನಂತರದ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಕಂಪನಿಗಳು ತಮ್ಮ ಸಿಎಸ್‍ಆರ್ ಅನುದಾನಡಿ ಆಮ್ಲಜನಕ ಘಟಕ, ಆಸ್ಪತ್ರೆಗಳಿಗೆ ಪರಿಕರಗಳನ್ನು ನೀಡುತ್ತಿರುವುದು ಅಭಿನಂದನೀಯ. ಆಸ್ಪತ್ರೆಗಳಲ್ಲಿ ಹೃದಯ ತಪಾಸಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಕೋ ಪರೀಕ್ಷೆಯ ಸಲಕರಣೆಗಳನ್ನು ಒದಗಿಸುವಂತೆ ಕಂಪನಿಗಳಿಗೆ ಮನವಿ ಮಾಡಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ವಿಜಯಾ.ಇ.ರವಿಕುಮಾರ್ ಮಾತನಾಡಿ, ಕಂಪನಿಗಳು ಆರೋಗ್ಯ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆಯಿಂದಾಗಿ ಇಂದು ಮೇಕ್‍ಶಿಪ್ಟ್ ನಂತಹ ಆಸ್ಪತ್ರೆಗಳು, ಆಮ್ಲಜನಕ ಘಟಕಗಳು ಕಾರ್ಯ ನಿರ್ವಹಿಸಲು ಅನುಕೂಲವಾಗಿದ್ದು, ಕಂಪನಿಗಳಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಸೇರಿದಂತೆ ಆಸ್ಪತ್ರೆಯ ವೈದ್ಯರು, ಡೆಲ್ ಕಂಪನಿಯ ಕಾರ್ಯಕ್ರಮ ಸಮೈಓಜಕ ಜೋಸೆಫ್, ಅಧಿಕಾರಿ ವೆಂಕಟ್, ಸೇರಿದಂತೆ ಕಂಪನಿಯ ಸಿಬ್ಬಂದಿ ಹಾಗೂ ನಗರಸಭಾ ಸದಸ್ಯರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……