ಬೆಂ ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವೈಲ್ಡ್ ಕ್ಯಾಟ್ಸ್ ಅಡ್ವೆಂಚರ್ ಅಸೋಸಿಯೇಷನ್ ಮತ್ತು ಯುವ ಸಂಚಲನ ತಂಡ ದೊಡ್ಡಬಳ್ಳಾಪುರ ಇವರ ಸಹಯೋಗದಲ್ಲಿ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ದೊಡ್ಡಬಳ್ಳಾಪುರದ ತಾಲ್ಲೂಕಿನ ಮಾಕಳಿದುರ್ಗ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ಚಾರಣಕ್ಕೆ(ಟ್ರೆಕ್ಕಿಂಗ್ಗೆ) ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯ. ಈ.ರವಿಕುಮಾರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್.ಗೀತಾ, ವಲಯ ಅರಣ್ಯಧಿಕಾರಿ ಮುನಿರಾಜು, ವೈಲ್ಡ್ ಕ್ಯಾಟ್ಸ್ ಅಡ್ವೆಂಚರ್ ಅಸೋಸಿಯೇಷನ್ನ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಮತ್ತು ಯುವ ಸಂಚಲನ ತಂಡದ ಅಧ್ಯಕರಾದ ಚಿದಾನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……