ಕನ್ನಡ ಭಾಷೆಯ ಬಳಕೆಗೆ ಇಂದಿನ ಯುವಪೀಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದೆ : ಉಪವಿಭಾಗಾಧಿಕಾರಿ ಅರುಳ್ ಕುಮಾರ್

ದೊಡ್ಡಬಳ್ಳಾಪುರ: ಕನ್ನಡ ಭಾಷೆ ಸಂಸ್ಕೃತಿ, ಪರಂಪರೆ ಶ್ರೀಮಂತವಾಗಿದ್ದು, ಜಗತ್ತಿನಲ್ಲಿಯೇ ವಿಶಿಷ್ಟವಾಗಿದೆ. ಕನ್ನಡ ಭಾಷೆಯನ್ನು  ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದ್ದು, ಆಧುನಿಕ ಸಂವಹನ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಭಾಷೆ ಹೆಚ್ಚಾಗಿ ಬಳಕೆಯಾಗಬೇಕಿದೆ ಎಂದು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಆಯೋಜಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ಕರ್ನಾಟಕ ಏಕೀಕರಣದ ಹಿನ್ನಲೆ ವಿವರಿಸಿದ ಅವರು, ಇಂದು ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯತ್ತ ದಾಪುಗಾಲಾಕುತ್ತಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಶ್ರೀಮಂತವಾಗಿದ್ದು, 8 ಜ್ಞಾನ ಪೀಠ ಪ್ರಶಸ್ತಿಗಳು ಲಭಿಸಿವೆ. ಆದರೆ ಇಂದು ಇತರೆ ಭಾಷೆಗಳ ಪ್ರಭಾವದಿಂದ ಮುಖ್ಯವಾಗಿ ಆಂಗ್ಲ ಭಾಷೆಯಿಂದ ಕನ್ನಡಕ್ಕೆ ದಕ್ಕೆಯಾಗುತ್ತಿದ್ದು, ನಾವು ಕನ್ನಡ ಭಾಷೆಯ ಮಹತ್ವ ಅರಿಯಬೇಕಿದೆ. ನಾಡಿನ ಕುರಿತು ಮಕ್ಕಳಿಗೆ ಅರಿವುಂಟು ಮಾಡುವ ಸಂಕಲ್ಪ ಮಾಡಿ, ಎಷ್ಟೇ ಭಾಷೆಗಳನ್ನು ಕಲಿತರೂ ಸಹ ಕನ್ನಡಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಡು, ಸಂಸ್ಕೃತಿಯ ಚಿಂತನೆ ಸದಾ ಕಾಲ ಬೆಳೆಸಿಕೊಳ್ಳಬೇಕಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ ನಾಡು, ನುಡಿ ಅಭಿಮಾನ ಎಲ್ಲರಲ್ಲೂ ಮೂಡಬೇಕಿದ್ದು, ಕನ್ನಡ ಭಾಷೆಯ ಬಳಕೆ ಹೆಚ್ಚಾಗಬೇಕಿದೆ. ನಾಮಫಲಕಗಳಲ್ಲಿ ಕನ್ನಡ ಬಾಷೆಯ ಬಳಕೆಯ ಕುರಿತು ಹೆಚ್ಚಿನ ಗಮನ ಹರಿಸಬೇಕಿದ್ದು, ನ.20ರೊಳಗೆ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳು ನಿಯಮಾನುಸಾರ ಕನ್ನಡದಲ್ಲಿ ಪ್ರದರ್ಶಿಸುವ ಬಗ್ಗೆ, ತಹಸೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ಸೂಚನೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ  ಟಿ.ಎಸ್.ಶಿವರಾಜ್, ನಗರಸಭೆಯ ಅಧ್ಯಕ್ಷೆ ಎಸ್.ಸುಧಾರಾಣಿ, ಉಪಾಧ್ಯಕ್ಷೆ ಫರ್ಹಾನಾ ತಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ವಿ.ಶುಭಮಂಗಳ ಸೇರಿದಂತೆ ನಗರಸಭಾ ಸದಸ್ಯರು ಹಾಗೂ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಹಾಜರಿದ್ದರು.

ಸಮಾರಂಭಕ್ಕೂ ಮುನ್ನ ಶುಕ್ರವಾರ ನಿಧನರಾದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]