ದೊಡ್ಡಬಳ್ಳಾಪುರ: ತಾಲೂಕಿನ ಶಿವಪುರ (ವಡ್ಡನಹಳ್ಳಿ)ಯಲ್ಲಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಶ್ರೀ ವೀರಶೈವ ಗೆಳೆಯರ ಬಳಗ ಸಂಘ ಹಾಗೂ ಶಿವಪುರ (ವಡ್ಡನಹಳ್ಳಿ) ಗ್ರಾಮಸ್ಥರು ಆಯೋಜಿಸಿದ್ದಾರೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಶ್ರೀ ಕ್ಷೇತ್ರ ಸಿದ್ದರ ಬೆಟ್ಟದ ಶ್ರೀ ಷ ಬ್ರ ವೀರಭದ್ರ ಶಿವಾಚಾರ್ಯ ಸ್ವಾಮಿಗಳು, ಕಂಚುಗಲ್ ಬಂಡೆಮಠದ ಅಧ್ಯಕ್ಷರಾದ ಬಸವಲಿಂಗ ಸ್ವಾಮಿಗಳು ವಹಿಸಲಿದ್ದಾರೆ.
ಅತಿಥಿಗಳಾಗಿ ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ಸಂಸ್ಥಾಪಕರಾದ ಬಿ.ಜಿ.ಜ್ಯೋತಿಪ್ರಕಾಶ್ ಮಿರ್ಜಿ, ವಿಶ್ವ ವೀರಶೈವ ಲಿಂಗಾಯತ ಒಕ್ಕೂಟದ ಅಧ್ಯಕ್ಷರಾದ ಹೆಚ್.ಆರ್.ಮೋಹನ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಒಕ್ಕೂಟದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……