ನವದೆಹಲಿ: ಹಸಿರು ಪಟಾಕಿ ಮತ್ತು ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಪಟಾಕಿಗಳನ್ನು ದೀಪಾವಳಿ ಹಬ್ಬದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಳಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಕೋವಿಡ್ ಸೋಂಕು ಹಾಗೂ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಪಟಾಕಿ ಸಂಪೂರ್ಣ ನಿಷೇಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಟಾಕಿ ಉತ್ಪಾದಿಸುವ ಕಂಪನಿಗಳು ಸುಪ್ರೀಂ ಮೊರೆ ಹೋಗಿದ್ದವು.
ಈ ಕುರಿತಂತೆ ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ಅಜಯ್ ರಸ್ತೋಗಿ ಅವರಿದ್ದ ಪೀಠ, ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಆಗುವುದಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ ಎಂದು ವರದಿ ತಿಳಿಸಿದೆ.
ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿಷೇಧಿತ ಪಟಾಕಿ ಮತ್ತು ಸಂಬಂಧಿತ ವಸ್ತುಗಳನ್ನು ರಾಜ್ಯದಲ್ಲಿ ಆಮದು ಮಾಡಿಕೊಳ್ಳದಿರುವುದನ್ನು ಖಚಿತಪಡಿಸಿಕೊಳ್ಳುವ ಸಾಧ್ಯತೆ ಕುರಿತು ಪರಿಶೀಲಿಸುವಂತೆ ಸೂಚಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..