ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ- ಮೇಳೆಕೋಟೆ ಮಾರ್ಗಮಧ್ಯದ ಕಾಚಹಳ್ಳಿಯಲ್ಲಿ ಬಳಿ ನಿಯಂತ್ರಣ ತಪ್ಪಿದ ಕಾರುು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಪ್ರಾಣಹಾನಿಯಾಗಿಲ್ಲ. ಭಾನುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಬಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಕಾರು ಕುರುವಿಗೆರೆ ಗ್ರಾಮದವರಿಗೆ ಸೇರಿದ್ದಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……