ಬೆಂ.ಗ್ರಾ.ಜಿಲ್ಲೆ: “66ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ” ಅಂಗವಾಗಿ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ “ಕನ್ನಡಾಂಬೆ, ಶ್ರೀ ಭುವನೇಶ್ವರಿ” ತಾಯಿಯ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವನಮನ ಸಲ್ಲಿಸಿದರು.
ನಂತರ ಜಿಲ್ಲಾಧಿಕಾರಿಯವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜೆಹೆಚ್‌ಎಂ ಇಂದಿರಮ್ಮ, ಆರ್‌ಹೆಚ್‌ಎಂ ಗಂಗಾಧರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……