ಬೆಂಗಳೂರು: ರಾಜ್ಯಾದ್ಯಂತ ಇಂದು 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ರಾಜ್ಯದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ಕನ್ನಡದಲ್ಲಿ ಮಾತನಾಡಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು,
ಕನ್ನಡ ನಮ್ಮೆಲ್ಲರನ್ನೂ ಒಗ್ಗೂಡಿಸಿದೆ.ಯಾವುದೇ ರಾಜ್ಯದ ಭಾಷೆ ಸಧೃಢವಾಗಿದ್ದರೆ ಆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಭಾರತದ ಅತ್ಯಂತ ಪುರಾತನವಾದ ಭಾಷೆ ಕನ್ನಡ. ಕನ್ನಡ ಭಾಷೆಗೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಎಲ್ಲಾ ರಂಗಗಳಲ್ಲೂ ಕನ್ನಡಕ್ಕೆ ಸ್ಥಾನ ನೀಡಬೇಕು. ಕನ್ನಡವನ್ನು ರಾಜ್ಯದ ಗಡಿಯೊಳಗೆ ಸೀಮಿತಗೊಳಿಸುವುದಲ್ಲ, ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಮಾಡಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……