ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಮಂಗಳವಾರ ಭಕ್ತ ಮಂಡಲಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ತಾಲೂಕಿನ ಪ್ರಸಿದ್ದ ಶ್ರೀ ಕ್ಷೇತ್ರ ಘಾಟಿ ದೇವಾಲಯದಲ್ಲಿ ವಿಶೇಷ ಅಲಂಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಗರ್ಭಗುಡಿಯ ಸುಬ್ರಮಣ್ಯಸ್ವಾಮಿಗೆ ನವಧಾನ್ಯ ಅಲಂಕಾರ ಹಾಗೂ ಏಕಶಿಲೆಯಲ್ಲಿನ ಹಿಂಭಾಗದ ನರಸಿಂಹಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು
ಬೆಳಿಗ್ಗೆ 6ರಿಂದ 8ರವರೆಗೆ ವಿಶೇಷ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದ್ದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಬೆಳಗ್ಗಿನ ಜಾವದಿಂದಲೇ ನೂರಾರು ಮಂದಿ ದೇವರ ದರ್ಶನಕ್ಕೆ ಕಾದು ನಿಂತಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……