ಬೆಂಗಳೂರು: ಇತ್ತೀಚಿಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಮನವಿ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಯಾವ ಪ್ರಶಸ್ತಿ, ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು.
ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತಾ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……