ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚು ಒತ್ತು‌ ನೀಡಲಾಗುವುದು: ಸಚಿವ ಎನ್.ನಾಗರಾಜ್ (ಎಂ.ಟಿ.ಬಿ)

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಒಡೆತ ಬಿದ್ದಿದದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು ಎಂದು ಪೌರಾಡಳಿ, ಸಣ್ಣ ಕೈಗಾರಿಕೆಗಳ‌ ಹಾಗೂ ಸಾರ್ವಜನಿಕ ವಲಯ ಉದ್ದಿಮೆಗಳ ಸಚಿವ ಎನ್ ನಾಗರಾಜ್( ಎಂ.ಟಿ.ಬಿ) ತಿಳಿಸಿದರು.

ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ೬೬ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ  ನಾಡದೇವಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚಾನೆ ಸಲ್ಲಿಸಿ,ರಾಷ್ಟ್ರ  ಧ್ವಜಾರೋಹಣವನ್ನು ನೆರವೇರಿಸಿ ನಂತರ ಮಾತನಾಡಿದರು. 

ಪಿ.ಎಂ‌ ಕೇರ್  ಅನುದಾನಡಿ ಪ್ರತಿ ತಾಲ್ಲೂಕಿನಲ್ಲಿ  ವೈದ್ಯಕೀಯ ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ ಹಾಗೂ ಕೋವಿಡ್ ಮಹಾ ಮಾರಿಯ ವಿರುದ್ದ ಹೋರಾಡಲು ಸರ್ಕಾರ ಲಸಿಕಾ ಅಭಿಯಾನಗಳನ್ನು  ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲು ಯಶಸ್ವಿಯಾಗಿದೆ ಎಂದು ತಿಳಿಸಿದರು.

ಕುವೆಂಪು, ದಾರಾ ಬೇಂದ್ರೆ, ಮಾಸ್ತಿ ವೆಂಕಟೇಶ್ ಐಯ್ಯಂಗಾರ್, ಶಿವರಾಮ ಕಾರಂತ, ಯು.ಆರ್ ಅನಂತ ಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ, ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿಯನ್ನು ತಂದು ಕೊಡುವುದರ ಜೊತೆಗೆ ಅನೇಕ ಮಹಾನ್ ನಾಯಕರು ಕನ್ನಡ ಭಾಷೆ, ಸಂಸ್ಕೃತಿ‌‌ ನೆಲ‌,‌ಜಲ ಉಳಿವು ಮತ್ತು ಬೆಳೆಸಿಕೊಂಡು ಹೋಗಲು ಶ್ರಮಿಸಿದ್ದಾರೆ‌ ಎಂದು ನೆನಪಿಸಿಕೊಂಡರು.  

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ  ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮಾತಾನಾಡಿ ಕನ್ನಡ ಭಾಷೆ ಮಾತಾನಾಡುವ ಪ್ರಾತ್ಯಗಳನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯ ರಚನೆಯಾಯಿತು.  ಅನ್ಯ ಭಾಷಿಗರನ್ನು ದೂಷಿಸುವ ಬದಲಾಗಿ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಿ ಕೊಂಡು ಹೋಗಲು ನಾವೆಲ್ಲರೂ ಮನನ ಮಾಡಿಕೊಳ್ಳಬೇಕು ಎಂದು ಹೇಳಿದರು. 

ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಎನ್. ನಾಗರಾಜ್ (ಎಂ.ಟಿ.ಬಿ) ಅವರು ಪರೇಡ್ ವೀಕ್ಷಿಸಿ, ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.

ಇದೇ ವೇಳೆ ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವರದಾನವಾಗಲು, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 17 ಹೋಬಳಿಗಳ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಸಾಮರ್ಥ್ಯ ಹೆಚ್ಚಿಸಲು ಅಳವಡಿಸಲಾದ ಸ್ಮಾರ್ಟ್ ಪ್ಯಾನಲ್ ಟಿ.ವಿ. , ಬೋಧನೆ ಪ್ರಾಯೋಗಿಕ ಕಾರ್ಯಕ್ರಮದ ವಿಡಿಯೋ ಸಂವಾದದ ತರಗತಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿ  ಕನ್ನಡ ಮಾಧ್ಯಮದಲ್ಲಿ 1 ರಿಂದ 10 ನೇ ತರಗತಿಯವರೆಗೆ ವ್ಯಾಸಾಂಗ ಮಾಡಿ ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ  ಪ್ರಶಸ್ತಿ ವಿತರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಹ ನೀಡಿ ಗೌರವಿಸಲಾಯಿತು.

ಜನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ, ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಣೆ, ಅಂಗವಿಕಲರಿಗೆ  ದ್ವಿ ಚಕ್ರ ವಾಹನ ವಿತರಿಸಲಾಯಿತು ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಬಾಲ ವ್ಯವಸ್ಥೆ ಹಾಗೂ ಕಿಶೋರಾವ್ಯಸ್ಥೆಯ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕುರಿತು ಜನ ಜಾಗೃತಿ ಸಂಚಾರಿ ವಾಹನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ‌ಕೆ.‌ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ ಆರ್. ರವಿಕುಮಾರ್, ಜಿಲ್ಲಾ ವರಿಷ್ಠಾಧಿಕಾರಿ ಡಾ.ಕೋನ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ವಿಜಯ ಈ. ರವಿಕುಮಾರ, ದೇವನಹಳ್ಳಿ ಪುರಸಭೆ ಅಧ್ಯಕ್ಷೆ ರೇಖಾ ವೇಣು ಗೋಪಾಲ್, ಪುರಸಭೆ ಉಪಾಧ್ಯಕ್ಷೆ ಪುಷ್ಪ, ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಅನಿಲ್ ಕುಮಾರ್, ದೇವನಹಳ್ಳಿ ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ನಾಗೇಶ್, ಸದಸ್ಯರುಗಳು,ಕನ್ನಡ ‌ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು ಹಾಗೂ ಮುಖಂಡರು, ಸಾರ್ವಜನಿಕರು, ವಿಧ್ಯಾರ್ಥಿಗಳು ಭಾಗವಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಟೀಕಿಸಿದರು.

[ccc_my_favorite_select_button post_id="111978"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಬಾಲಕನನ್ನ ಅಪಹರಿಸಿ ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು

ಬಾಲಕನನ್ನ ಅಪಹರಿಸಿ ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು

ಬಾಲಕನನ್ನ ಅಪಹರಿಸಿ (kidnapped) ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು (Police) ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ

[ccc_my_favorite_select_button post_id="111980"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!