ಬೆಂ.ಗ್ರಾ.ಜಿಲ್ಲೆ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಸರ್ಕಾರಿ/ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯ ಒದಗಿಸಲು, ಪ್ರತಿ ತಿಂಗಳಿಗೆ ರೂ1500ರಂತೆ ಶೈಕ್ಷಣಿಕ ಅವಧಿಯಲ್ಲಿ ಅಕ್ಟೋಬರ್-2021 ರಿಂದ ಮಾರ್ಚ್-2021ರ ವರೆಗೆ 6 ತಿಂಗಳಿಗೆ ರೂ 9000ಗಳನ್ನು (ಗರಿಷ್ಠ) ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು. ಅರ್ಜಿಯನ್ನು ವೆಬ್‌ಸೈಟ್ ವಿಳಾಸ https://dom.karnataka.gov.in ಇಲ್ಲಿ ಆನ್ ಲೈನ್ ಮೂಲಕ 2021ರ ನವೆಂಬರ್ 30ರೊಳಗೆ ಸಲ್ಲಿಸಬಹುದು.
ಆಸಕ್ತ ವಿದ್ಯಾರ್ಥಿಗಳು, ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹತೆಗಳು, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ಬಗ್ಗೆ ಮಾಹಿತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ: 216ರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಅಥವಾ ದೂರವಾಣಿ ಸಂಖ್ಯೆ: 080-29787455 ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮೈಲೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……