ಕನ್ನಡ ಶಾಲೆಗಳಲ್ಲಿ ಕನ್ನಡ ಕಲಿಯುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಅಗತ್ಯ ನೆರವು ನೀಡುವುದು ಎಲ್ಲರ ಕರ್ತವ್ಯವಾಗಲಿ

ದೊಡ್ಡಬಳ್ಳಾಪುರ: ಸರ್ಕಾರಿ ಕನ್ನಡ ಶಾಲೆಗಳಲ್ಲಿ ಓದುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಅಗತ್ಯವಾದ ಉತ್ತೇಜನ ನೀಡುವುದು ಎಲ್ಲಾ ಕನ್ನಡಿಗರ ಕರ್ತವ್ಯವಾಗಬೇಕು. ಹೀಗಾಗಿ ನನ್ನ ಹುಟ್ಟುಹಬ್ಬವನ್ನು ಕನ್ನಡ ಕಲಿಯುತ್ತಿರುವ ಮಕ್ಕಳಿಗೆ ಅಗತ್ಯ ಕಲಿಕಾ ಸಾಮಗ್ರಿಗಳನ್ನು ನೀಡುವ ಮೂಲಕ ಅವರ ಕನ್ನಡ ಕಲಿಕೆಗೆ ಉತ್ತೇಜನ ನೀಡುತ್ತಿದ್ದೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್‌ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ತಿಳಿಸಿದರು.

ಕರವೇ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ತಾಲೂಕು ಘಟಕ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಅವರ ಜನ್ಮ ದಿನಾಚರಣೆ ಅಂಗವಾಗಿ ಮಂಗಳವಾರ ತಾಲೂಕಿನ ಕೋಡಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಕಲಿಯುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಬ್ಯಾಗ್, ಪುಸ್ತಕಗಳು ಸೇರಿದಂತೆ ಅಗತ್ಯ ಕಲಿಕಾ ಸಾಮಾಗ್ರಿಗಳ ವಿತರಣೆ ಕಾರ್‍ಯಕ್ರಮದಲ್ಲಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ನಮಗೆ ಕನ್ನಡ ಬರುವುದಿಲ್ಲ ಎನ್ನುವುದೇ ಪ್ಯಾಷನ್ ಆಗಿ ಹೋಗಿದೆ. ಈ ಮೂಲಕ ನಮ್ಮ ತಾಯಿ ಭಾಷೆಯನ್ನೆ ತೆಗಳುವುದು ಹೆಮ್ಮ ಎಂದು ಕೊಳ್ಳುತ್ತಿರುವ ಕನ್ನಡಿಗರು ಈ ಮೂಲಕ ನಮ್ಮ ತಾಯಿಯನ್ನೆ ತೆಗಳುವ ಮೂಲಕ ನಾಚಿಕೆಗೇಡು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಯಬೇಕಾಗಿದೆ. ಕನ್ನಡ ಭಾಷೆಗೆ ಇರುವ ಶಕ್ತಿಯನ್ನು ನಾವು ಮೊದಲು ತಿಳಿದುಕೊಳ್ಳದ ಹೊರತು ನಾವು ಕನ್ನಡವನ್ನು ಉಳಿಸಿ ಬೆಳಸುವುದು ಅಸಾಧ್ಯದ ಮಾತಾಗಿದೆ. ಇಂತಹ ಕಾರ್‍ಯವನ್ನು ಪ್ರಾಥಮಿಕ ಶಿಕ್ಷಣದ ಹಂತದಿಂದಲೆ ಶಿಕ್ಷಕರು ಮಕ್ಕಳಿಗೆ ತುಂಬುವ ಬಹು ದೊಡ್ಡ ಜವಾಬ್ದಾರಿ ಅವರ ಮೇಲಿದೆ ಎಂದರು. 

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಶ್ರಮಿಕ ವರ್ಗದ ಮಕ್ಕಳು ಮಾತ್ರ ಕನ್ನಡವನ್ನು ಉಳಿಸುವ ಕಾರ್‍ಯವನ್ನು ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡಿರುವ ಶ್ರಮಿಕ ವರ್ಗದ ಮಕ್ಕಳ ಕನ್ನಡ ಕಲಿಕೆಗೆ ಹೆಚ್ಚಿನ ಒತ್ತು ನೀಡುತ್ತಿರುವ ಕರವೇ ಕಾರ್‍ಯ ಶ್ಲಾಘನೀಯ ಎಂದರು.  

ಹಮಾಮ್ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಕೋಡಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೊರ ರಾಜ್ಯದ ಮಕ್ಕಳಿಗೆ ಬ್ಯಾಗ್, ಪುಸ್ತಕಗಳು ಸೇರಿದಂತೆ ಅಗತ್ಯ ಕಲಿಕಾ ಸಾಮಾಗ್ರಿಗಳನ್ನು ನೀಡಲಾಯಿತು. ಇದರೊಂದಿಗೆ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಕಾರ್‍ಯಕ್ರಮದಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. 

ಈ ವೇಳೆ ವಿಎಸ್‌ಎಸ್‌ಎನ್ ಅಧ್ಯಕ್ಷ ಆಂಜಿನಪ್ಪ, ಎಸ್‌ಡಿಎಂಸಿ ಅಧ್ಯಕ್ಷ ರಾಮಕೃಷ್ಣಪ್ಪ, ಕರವೇ ತಾಲೂಕು ಅಧ್ಯಕ್ಷ ಎಚ್.ಎಸ್.ವೆಂಕಟೇಶ್, ವಕೀಲರಾದ   ಅನಂದ್‌ಕುಮಾರ್, ಬಿಜೆಪಿ ಮುಖಂಡ ವಿಶ್ವಾಸ್‌ಗೌಡ, ನಿವೃತ್ತ ಶಿಕ್ಷಕರಾದ ನಾಗರಾಜು ಮಾತನಾಡಿದರು.

ಕರವೇ ಪದಾಧಿಕಾರಿಗಳಾದ ಎಸ್‌ಎಲ್‌ಎನ್ ವೇಣು, ಸೊಣ್ಣಮಾರನಹಳ್ಳಿ ಆನಂದ್, ಮಂಜುನಾಥ್, ರಾಜಘಟ್ಟ ಮಹೇಶ್, ಜೋಗಹಳ್ಳಿ ಅಮ್ಮು, ಸೂರಿ ಬಾಬು, ಹಮಾಮ್ ಶಾಲೆ ಮು.ಶಿಕ್ಷಕರಾದ ಬಿ.ಎನ್.ಅಂಜನಮೂರ್ತಿ, ಶಾರದಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣ ಶಿವಕುಮಾರ್, ಚೈತ್ರ ಸುರೇಶ್, ಮುಖಂಡ ವಡ್ಡರಹಳ್ಳಿ ಶಂಕರಪ್ಪ ಸೇರಿದಂತೆ  ಗ್ರಾಮದ ಅನೇಕ ಮುಖಂಡರು ಇದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!