ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹಾಗೂ ಚಿತ್ರ ನಟ ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿಗಾಗಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಸಂಘ ಮತ್ತು ತೂಬಗೆರೆ ಯೂಥ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಯಿತು.
ಸ್ವಚ್ಛತಾ ಅಭಿಯಾನಕ್ಕೆ ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ಬಾಬು ಚಾಲನೆ ನೀಡಿದರು. ತೂಬಗೆರೆ ಯೂತ್ ಸ್ಪೋರ್ಟ್ಸ್ ಕ್ಲಬ್ ಸಂಚಾಲಕರು ಮಾತನಾಡಿ, ಪುನೀತ್ ಅಗಲಿಕೆ ನಮಗೆ ತೀವ್ರ ನೋವುಂಟು ಮಾಡಿದೆ. ಇಡೀ ಕರುನಾಡು ಕಂಬನಿ ಮಿಡಿದು ಪ್ರಪಂಚದಾದ್ಯಂತ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅವರ ಅಗಲಿಕೆ ಕಲಾ ಪ್ರಪಂಚಕ್ಕೆ ತುಂಬಲಾರದ ನಷ್ಟ ಎಂದರು.
ತೂಬಗೆರೆ ಆಸ್ಪತ್ರೆ ಗ್ರಾಮ ಪಂಚಾಯಿತಿ ಆವರಣ ಬಸ್ ತಂಗುದಾಣ ಮುಖ್ಯ ರಸ್ತೆಗಳನ್ನು ಸ್ವಚ್ಛಗೊಳಿಸಲಾಯಿತು. ತೂಬಗೆರೆ ಗ್ರಾಮಸ್ಥರು, ಯುವಕರು ಪುನೀತ್ ಅಭಿಮಾನಿಗಳು ಸ್ವಚ್ಛತಾ ಆಂದೋಲನದಲ್ಲಿ ಭಾಗವಹಿಸಿ ಕರ್ನಾಟಕ ರಾಜ್ಯೋತ್ಸವ ಸರಳ ಆಚರಣೆ ಹಾಗೂ ಪುನೀತ್ ರಾಜ್‍ಕುಮಾರ್ ಅವರಿಗೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ತೂಬಗೆರೆ ಯುತ್ ಸ್ಪೋರ್ಟ್ಸ್ ಕ್ಲಬ್ನ ಪದಾಧಿಕಾರಿಗಳು, ಪುನೀತ್ ರಾಜ್‍ಕುಮಾರ್ ಅಭಿಮಾನಿ ಸಂಘದ ಪದಾಧಿಕಾರಿಗಳು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……