ನವದೆಹಲಿ: ಭಾರತ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ.
ರವಿಶಾಸ್ತ್ರಿ ಬಳಿಕ ಬಾರತ ತಂಡದ ಮುಖ್ಯ ಕೋಚ್ ಯಾರಾಗಲಿದ್ದಾರೆ ಎಂಬ ಚರ್ಚೆ ತೀವ್ರವಾಗಿತ್ತು. ಈ ಚರ್ಚೆಗೆ ಬಿಸಿಸಿಐ ತೆರೆ ಎಳೆದಿದ್ದು, ರಾಹುಲ್ ದ್ರಾವಿಡ್ ಭಾರತದ ನೂತನ ಹೆಡ್ ಕೋಚ್ ಎಂದು ತಿಳಿಸಿದೆ.
ಬಿಸಿಸಿಐ ನೀಡಿದ ಆಫರ್ ಅನ್ನು ತಿರಸ್ಕರಿಸಿದ್ದ ದ್ರಾವಿಡ್, ಎನ್ಸಿಎ ಮುಖ್ಯಸ್ಥರಾಗಿ ಮುಂದುವರೆಯುತ್ತೇನೆ ಎಂದಿದ್ದರು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಹುಲ್ ದ್ರಾವಿಡ್ ಅವರ ಮನವೊಲಿಸಲು ಯಶಸ್ವಿಯಾಗಿದ್ದು, ಅದರಂತೆ ಭಾರತ ತಂಡದ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಅವರನ್ನು ಆಯ್ಕೆ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……