ದೀಪಾವಳಿಗೆ ಬೆಲೆ ಏರಿಕೆ ಸ್ವಾಗತ: ಕಟ್ಟು ನಿಟ್ಟಿನ ನಿಯಮಗಳಿಂದ ಕಳೆಗುಂದಿದ ಪಟಾಕಿ ವ್ಯಾಪಾರ

ದೊಡ್ಡಬಳ್ಳಾಪುರ: ದೀಪಾವಳಿ ಹಬ್ಬದ ಸಾಲಿನ ನರಕ ಚತುರ್ದಶಿ ಆಚರಣೆ ತಾಲೂಕಿನಲ್ಲಿ ನಡೆಯುತ್ತಿದ್ದು, ದೀಪಾವಳಿಯ ಪಟಾಕಿ ಮಾರಾಟ ಕಳೆಗುಂದಿದೆ.

ಈ ಬಾರಿ ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿ ಹಾಗೂ ಮಾಲಿನ್ಯರಹಿತ ಪಟಾಕಿಗಳ ಮಾರಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ಪರವಾನಗಿ ಸಿಗುವುದು ವಿಳಂಬವಾಗಿ, ಪಟಾಕಿ ಮಾರಾಟಗಾರರು ಕಾದು ಕುಳಿತುಕೊಳ್ಳುವಂತಾಗಿತ್ತು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪರವಾನಗಿ ಪಡೆದ 8 ಅಂಗಡಿಗಳ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಲು ತೆರೆದಿದ್ದು ವ್ಯಾಪಾರವಿಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ.

ಮಾರ್ಗ ಸೂಚಿ ಅನ್ವಯ ಮಾರಾಟ: ಸುಪ್ರೀಂ ಕೋರ್ಟ್ ಸೂಚನೆಯಂತೆ ಹಸಿರು ಪಟಾಕಿಗಳ ತಯಾರಿಕೆಯ ಮಾರ್ಗಸೂಚಿಗಳನ್ನು ಅನುಸರಿಸಿ ತಯಾರಿಸಲಾಗಿರುವ ಕಂಪನಿಗಳಿಂದಲೇ ನಾವು ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ ಗ್ರಾಹಕರು ಯಾವುದೇ ಆತಂಕವಿಲ್ಲದೇ ಖರೀದಿಸಬಹುದು. ಆದರೆ ಎಂದಿನಂತೆ ನಮಗೆ ಪಟಾಕಿ ಅಂಗಡಿ ಇಡುವುದಕ್ಕೆ ಜಾಗ ನೀಡುವುದು ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು ಪರವಾನಗಿ ಪಡೆಯುವುದು ಸಹ ತ್ರಾಸವಾಗಿತ್ತು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪಟಾಕಿ ವ್ಯಾಪಾರ ಕುಸಿತ ಕಂಡಿದೆ. ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿದರೂ ಮುಂಚಿತವಾಗಿ ಹೇಳಿದರೆ ನಮಗೆ ಅನುಕೂಲವಾಗಲಿದೆ ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳು.

ಬೆಲೆ ಎರಿಕೆ ನಡುವೆ ದೀಪಾವಳಿಗೆ ಸ್ವಾಗತ: ದೀಪಾವಳಿ ಹಿನ್ನಲೆಯಲ್ಲಿ ಹೂ, ಸೊಪ್ಪು ತರಕಾರಿಗಳ ಬೆಲೆ ಗಗನಕ್ಕೇರಿವೆ. ದೀಪಾವಳಿಯಲ್ಲಿ ಮನೆ ಮುಂದೆ ಹಚ್ಚಿಡುವ ಹಣತೆಗಳ ಮಾರಾಟ ಭರದಿಂದ ಸಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿ ದೀಪಾವಳಿಗೆ ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಕೊಂಡೊಯ್ಯುತ್ತಿರುವ ಸಾರ್ವಜನಿಕರು  ಹಬ್ಬ ಆಚರಿಸುವ ದೃಶ್ಯ ಸಾಮಾನ್ಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!