ದೊಡ್ಡಬಳ್ಳಾಪುರ: ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ದಲಿತ ವಿದ್ಯಾರ್ಥಿ ದಿಲೀಪ್ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಪ್ರಕಾಶ್ ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಗುರುವಾರ ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ಸಂಘಟನೆ ವತಿಯಿಂದ ನಗರದ ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ಸಂಘಟನೆ ರಾಜ್ಯ ಅಧ್ಯಕ್ಷ ಮುನಿಅಂಜನಪ್ಪ, ಕ್ಷುಲ್ಲಕ ವಿಚಾರಕ್ಕಾಗಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಆದರೆ ಪೊಲೀಸರು ದೂರು ದಾಖಲಿಸಿದ್ದಾರೆ ವಿನಹ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇಂತಹ ಹಲ್ಲೆಗಳು ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ಆರೋಪಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಸಮಾಜ ಕಲ್ಯಾಣ ಇಲಾಖೆ ಜನರಲ್ಲಿ ಅಸ್ಪೃಷ್ಯತೆ ತಡೆಯುವ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಪ್ರತಿಭಟನೆಯಲ್ಲಿ ಪ್ರಜಾ ವಿಮೋಚನಾ ಚಳುವಳಿ ಸ್ವಾಭಿಮಾನ ಸಂಘಟನೆ ಬೆಂಗಳೂರು ನಗರದ ಅಧ್ಯಕ್ಷ ಅಯೂಬ್ಖಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಗೂಳ್ಯ ಹನುಮಣ್ಣ, ಪ್ರದಾನ ಕಾರ್ಯದರ್ಶಿ ಚನ್ನಮರಿಯಪ್ಪ, ತಾಲ್ಲೂಕು ಅಧ್ಯಕ್ಷ ಪುನೀತ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಹೊಸಕೋಟೆ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಯಲಹಂಕ ಅಧ್ಯಕ್ಷ ಕಾಂತರಾಜ್, ಮುನಿಲಕ್ಷ್ಮಮ್ಮ, ಕಾರ್ಮಿಕ ಘಟಕದ ಅಧ್ಯಕ್ಷ ಅಶೋಕ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……