ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿನ ಬಾಂಬೆ ರೆಯಾನ್ ಕಾರ್ಖಾನೆವತಿಯಿಂದ ಕಾರ್ಮಿಕರಿಗೆ ಪಿಎಫ್ ಹಣ ನೀಡದೆ ವಂಚಿಸಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಮಾನವ ಹಕ್ಕುಗಳ ಪ್ರಚಾರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿ, ಕಾರ್ಮಿಕರ ಭವಿಷ್ಯ ನಿಧಿ ಹಣ ಕಾರ್ಮಿಕರ ಪರಿಶ್ರಮದ ಹಣವಾಗಿದೆ. ಈ ಹಣವನ್ನು ಯಾವುದೇ ಕಾರ್ಖಾನೆ ನ್ಯಾಯಯುತವಾಗಿ ನೀಡಬೇಕು. ಇಲ್ಲವಾದರೆ ಕಾರ್ಮಿಕರ ಕುಟುಂಬದವರೊಂದಿಗೆ ಕಾರ್ಖಾನೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು. ಈ ಕುರಿತಂತೆ ಕಾರ್ಖಾನೆಯ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾನವ ಸಂಪನ್ಮೂಲ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಪ್ರಚಾರ ವೇದಿಕೆ ಕಾರ್ಮಿಕ ಘಟಕದ ತಾಲ್ಲೂಕು ಅಧ್ಯಕ್ಷ ಸಿ.ಅರುಣಕುಮಾರ್, ಪ್ರಜಾವಿಮೋಚನ ಚಳುವಳಿ ಸಮತಾವಾದ ಬೆಂಗಳೂರು ವಿಭಾಗೀಯ ಅಧ್ಯಕ್ಷ ನರಸಪ್ಪ, ಉಪಾಧ್ಯಕ್ಷ ರಾಮಾಂಜಿನಪ್ಪ, ಜಿ.ಶ್ರೀನಿವಾಸ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….