ಆಟೋ ಚಾಲಕರ ಸಂಘ ಹಾಗೂ ಆರೂಢಿ ಗ್ರಾಮಸ್ಥರಿಂದ ಸಂಭ್ರಮದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ

ದೊಡ್ಡಬಳ್ಳಾಪುರ: ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಏಕೀಕರಣವಾದರೆ ಸಾಲದು. ಕನ್ನಡದ ಮನಸ್ಸುಗಳು ಏಕೀಕರಣವಾಗಬೇಕು ಎಂದು ದೈಹಿಕ ಶಿಕ್ಷಣ ಶಿಕ್ಷಕ ಬರಗೂರು ನರಸಿಂಹ ಮೂರ್ತಿ ತಿಳಿಸಿದರು.

ತಾಲೂಕಿನ ಆರೂಢಿ ಗ್ರಾಮದಲ್ಲಿ ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ಹಾಗೂ ಗ್ರಾಮಸ್ಥರಿಂದ ಶನಿವಾರ ಆಯೋಜಿಸಲಾಗಿದ್ದ 66ನೇ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ನಂತರದ ಅವರು ಮಾತನಾಡಿದರು.

ಕನ್ನಡಿಗರಾದ ನಾವು ನಾಡಿನಾದ್ಯಂತ ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಕನ್ನಡ ರಾಜ್ಯೋತ್ಸವದ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಿರಂತರವಾಗಿರುವುದು ಹೆಮ್ಮೆಯ ವಿಚಾರ. ಈ ಶುಭ ಸಮಾರಂಭದಲ್ಲಿ ಎಲ್ಲರಿಗೂ 66ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. 

ಕನ್ನಡದ ಕಾರಣಕ್ಕೆ ಒಗ್ಗೂಡಿರುವ ಜನ ನಾವು ಸ್ವಾತಂತ್ರ್ಯ ಪೂರ್ವದಲ್ಲಿ ಹಲವು ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರ ಹಲವು ಪ್ರದೇಶಗಳನ್ನು ಒಂದುಗೂಡಿಸಿ, 1956ರ ನವೆಂಬರ್ 1 ರಂದು ಕರ್ನಾಟಕ ಏಕೀಕರಣ ಮಾಡಲಾಯಿತು ಎಂದರು.

ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಸಿದ್ದರಾಮಯ್ಯ ಮಾತನಾಡಿ, ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ.

ರಾಜ್ಯ ಪುನರ್ವಿಂಗಡಣ ಸಮಿತಿಯು ಮೈಸೂರು ರಾಜ್ಯಕ್ಕೆ ಬಂದು ಮೊದಲು ನಡೆಸಿದ ಮೊದಲ ಸಭೆಯಲ್ಲಿ ಅಂದಿನ ರಾಜ ಪ್ರಮುಖರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರು ಏಕೀಕರಣದ ಪರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ನಾವು ಸ್ಮರಿಸಬೇಕು.

ಕರ್ನಾಟಕದ ಏಕೀಕರಣದ ಹೋರಾಟದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಧ್ವನಿ ಎತ್ತಿದವರು ಸಾಹಿತಿಗಳು ಹಾಗೂ ರಾಜಕಾರಣಿಗಳು. ರಾಷ್ಟ್ರಕವಿ ಕುವೆಂಪು ಅವರು ಸಹ ಕರ್ನಾಟಕ ಏಕೀಕರಣಕ್ಕೆ ಒತ್ತಾಸೆಯಾಗಿ ನಿಂತಿದ್ದರು. ಕವೆಂಪು ಅವರ `ಜೈ ಭಾರತ ಜನನಿನಿಯ ತನುಜಾತೆ’ ಗೀತೆಯು ನಮ್ಮ ರಾಜ್ಯದ ನಾಡಗೀತೆಯಾಗಿದೆ. ಸಾಹಿತಿಗಳು, ಚಿಂತಕರು, ಲೇಖಕರು ತಮ್ಮ ಬರಹಗಳ ಮೂಲಕ ಏಕೀಕರಣದ ಪರವಾಗಿ ಧ್ವನಿಗೂಡಿಸಿದರು.

ಹೀಗೆ, ಕನ್ನಡ ನಾಡಿನ ಸ್ಥಾಪನೆಗೆ ಹಾಗೂ ಕರ್ನಾಟಕದ ಸರ್ವತೋಮುಖ ಬೆಳವಣಿಗೆಗೆ ಅನೇಕರು ಶ್ರಮಿಸಿದ್ದಾರೆ. ಅವರೆಲ್ಲರನ್ನು ಇಂದು ಗೌರವಪೂರ್ವಕವಾಗಿ ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಾಲಾ ಮಕ್ಕಳು ಕನ್ನಡ ಗೀತೆಗಳನ್ನು ಹಾಡಿದರು. ಆಟೋ ಚಾಲಕರು ವಾಹನಗಳು ಅಲಂಕರಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದರು. ಸಂಜೆ ತಾಯಿ ಭುವನೇಶ್ವರಿಗೆ ಬೆಳ್ಳಿರಥದ ಮೆರವಣಿಗೆ ಆಯೋಜಿಸಲಾಗಿದೆ.

ಈ ವೇಳೆ ಗ್ರಾಮಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ಯುವ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!