ಹಾಸನಾಂಬೆ ದರ್ಶನಕ್ಕೆ ತೆರೆ: ದೇವಾಲಯಕ್ಕೆ ನಾಲ್ಕು ಲಕ್ಷ ಭಕ್ತರ ಭೇಟಿ

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ತೆರೆ ಬಿದ್ದಿದ್ದು, ಇಂದು ಮಧ್ಯಾಹ್ನ  ಸುಮಾರು 1 ಗಂಟೆ ವೇಳೆಗೆ  ಸಕಲ ಧಾರ್ಮಿಕ ವಿದಿವಿಧಾನಗಳ ಮೂಲಕ ದೇವಾಲಯದ ಬಾಗಿಲು ಮುಚ್ಚಲಾಗಿದ್ದು, 9 ದಿನಕ್ಕೆ ದರ್ಶನ ಮಹೋತ್ಸವ ಮುಕ್ತಾಯಗೊಂಡಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಹಾಗೂ ಶಾಸಕರಾದ ಪ್ರೀತಂ ಜೆ ಗೌಡ ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ನಗರಸಭೆ ಅಧ್ಯಕ್ಷರಾದ ಮೋಹನ್ ಮತ್ತಿತರರ ಸಮ್ಮುಖದಲ್ಲಿ ದೇವಾಲಯದ ಬಾಗಿಲು ಹಾಕಲಾಯಿತು.

ಕೊನೆಯ ದರ್ಶನಕ್ಕೆ ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶ ಇಲ್ಲದಿದ್ದರೂ ಸಹ ನೂರಾರು ಭಕ್ತರು ನೆರೆದಿದ್ದ ಎಲ್ಲರಿಗೂ ಜಿಲ್ಲಾಡಳಿತದ ವತಿಯಿಂದ ಅವಕಾಶ ಕಲ್ಪಿಸಲಾಯಿತು.

ದೇವಾಲಯದ ಬಾಗಿಲು ಮುಚ್ಚಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಈ ಬಾರಿ ಅಂದಾಜು ನಾಲ್ಕು ಲಕ್ಷ ಜನರಿಂದ ದೇವಿ ದರ್ಶನವಾಗಿದೆ ಎಲ್ಲವೂ ಅಚ್ಚು ಕಟ್ಟಾಗಿ ನಡೆದಿದೆ ಎಂದರು.

ದೇವಿಯ ದರ್ಶನಕ್ಕೆ ಜಿಲ್ಲೆಯ, ಹೊರಜಿಲ್ಲೆಯ ಹಾಗೂ ಹೊರ ರಾಜ್ಯಗಳಿಂದ ಬಂದಂತಹ ಭಕ್ತಾದಿಗಳಿಗೆ ಜಿಲ್ಲಾಡಳಿತದ ವತಿಯಿಂದ ಸುವ್ಯವಸ್ಥಿತವಾಗಿ ಅವಕಾಶ ಕಲ್ಪಿಸಲಾಗಿತ್ತು ಎಂದು ಸಚಿವರು ತಿಳಿಸಿದರು.

ಕೋವಿಡ್ ಮುಂಜಾಗ್ರತಾ ಕ್ರಮ ಕೈಗೊಂಡು ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು ಎಂದು ಸಚಿವರು ಹೇಳಿದರು.

ರಾಜ್ಯದ ಜನತೆಗೆ ದೇವರು ಆರ್ಶೀವಾದ ಕರುಣಿಸಲಿ ಎಂದು ಹಾರೈಸುತ್ತಾ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಪೂರ್ಣಗೊಳ್ಳಲು ಸಂಪೂರ್ಣ ಸಹಕಾರ ನೀಡಿದಂತಹ ಆಡಳಿತ ವರ್ಗ, ಭಕ್ತಾದಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಶಾಸಕ ಪ್ರೀತಮ್ ಜೆ. ಗೌಡ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಡಳಿತ ಅಚ್ಚುಕಟ್ಟಾಗಿ ಜಾತ್ರಾ ಮಹೋತ್ಸವವನ್ನು ನೆರವೇರಿಸಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಹೊರ ರಾಜ್ಯಗಳಿಂದ ಬಂದಂತಹ ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. ಮುಂದಿನ ಬಾರಿ ಇನ್ನು ಹೆಚ್ಚು ವ್ಯವಸ್ಥಿತವಾಗಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಆರ್,ಗಿರೀಶ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ವಿವಿಧ ಇಲಾಖೆಯವರ ಮಾರ್ಗದರ್ಶನದಿಂದ ಜಾತ್ರಾ ಮಹೋತ್ಸವವು ಯಶಸ್ವಿಯಾಗಿ ಪೂರ್ಣಗೊಂಡಿದೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳು ಹಾಗೇ ಹಾಸನಾಂಬ ದೇವಿ ದರ್ಶನ ಪಡೆದ ಭಕ್ತಾದಿಗಳ ಜೀವನದಲ್ಲಿ ಆ ದೇವಿ ಬೆಳಕು ನೀಡಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ನಗರಸಭೆ ಅಧ್ಯಕ್ಷರಾದ ಮೋಹನ್, ತಹಶೀಲ್ದಾರ್ ನಟೇಶ್, ವಾರ್ತಾಧಿಕಾರಿ ವಿನೋದ್ ಚಂದ್ರ, ಡಿ,ವೈ.ಎಸ್.ಪಿ ಉದಯ್ ಭಾಸ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!