ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ “ಸಖಿ” ಒನ್ ಸ್ಟಾಪ್ ಸೆಂಟರ್ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನವೆಂಬರ್ 08 ರಂದು ಮಧ್ಯಾಹ್ನ 3.30 ಗಂಟೆಗೆ ಏರ್ಪಡಿಸಲಾಗಿದೆ.
ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್( ಎಂ.ಟಿ.ಬಿ) ಅವರು “ಸಖಿ” ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರಾದ ಹಾಲಪ್ಪ ಆಚಾರ್ ಅವರ ಘನ ಉಪಸ್ಥಿತಿಯಲ್ಲಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್., ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ತಿನ ಶಾಸಕರಾದ ಪುಟ್ಟಣ್ಣ, ಬೆಂಗಳೂರು ಪದವೀಧರರ ಕ್ಷೇತ್ರದ ಶಾಸಕರಾದ ಅ.ದೇವೆಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ತಿನ ಶಾಸಕರಾದ ಎಸ್.ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಉಮಾ ಮಹಾದೇವನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಮತ್ತು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಪಿ.ಹೇಮಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ದಿಬ್ಬೂರು ಜಯಣ್ಣ, ಕೆ.ಎಮ್.ಎಫ್ ಹಾಗೂ ಬಮೂಲ್ ನಿರ್ದೇಶಕರಾದ ಬಿ.ಸಿ.ಆನಂದ್‌ಕುಮಾರ್, ದೊಡ್ಡಬಳ್ಳಾಪುರದ ಎ.ಪಿ.ಎಮ್.ಸಿ. ಅಧ್ಯಕ್ಷರು ಹಾಗೂ ಕರ್ನಾಟಕ ಕೃಷಿ ಮಂಡಳಿಯ ಸದಸ್ಯರಾದ ಎನ್.ವಿಶ್ವನಾಥರೆಡ್ಡಿ, ದೊಡ್ಡಬಳ್ಳಾಪುರ ಟಿ.ಎ.ಪಿ.ಎಮ್.ಸಿ.ಎಸ್. ಅಧ್ಯಕ್ಷರಾದ ಸಿದ್ದರಾಮಯ್ಯ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷರಾದ ಫರ್ಹಾನ್ ತಾಜ್ ಅವರು ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್ ರವಿಕುಮಾರ್, ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ.ಕೋನ ವಂಶಿ ಕೃಷ್ಣ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಿ.ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್.ಎಸ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆಂದು ಸಿಡಿಪಿಒ ಅನಿತಾಲಕ್ಷ್ಮೀ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….