ದೊಡ್ಡಬಳ್ಳಾಪುರ: ಮಹಾಮಾರಿ ಕರೊನಾದಿಂದ ಇಡೀ ದೇಶದಾದ್ಯಂತ ಶಾಲಾ ಕಾಲೇಜುಗಳು ಮುಚ್ಚಿದ್ದವು. ಇದೀಗ ಶಾಲಾ ಕಾಲೇಜುಗಳು ಬಹುತೇಕ ಪ್ರಾರಂಭಗೊಂಡಿದೆ ಹಾಗೂ ನವೆಂಬರ್ 8 ರಿಂದ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳ ತೆರೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಕರೊನಾ ರೋಗದಿಂದಾಗಿ ರಾಜ್ಯಾದಲ್ಲಿ ಒಂದೂವರೆ ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಮುಚ್ಚಲಾಗಿತ್ತು. ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭಗೊಳ್ಳಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಒ ಅನಿತಾಲಕ್ಷ್ಮೀ ತಿಳಿಸಿದ್ದಾರೆ.
ನವೆಂಬರ್ 8ರಿಂದ ರಾಜ್ಯದಲ್ಲಿ ಅಂಗನವಾಡಿ ಓಪನ್ ಆಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆದಿರಬೇಕು. ಅಂಗನವಾಡಿ ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……