ವಡ್ಡರಹಳ್ಳಿ ಗ್ರಾಮದಲ್ಲಿ ಕೃಷಿ ವಿವಿಯ ಬಿಎಸ್ಸಿ(ಕೃಷಿ) ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಕೃಷಿ ಪರ್ವ, ಕೃಷಿ ನಾದ- ಕೃಷಿ ವಸ್ತು ಪ್ರದರ್ಶನ ಹಾಗೂ ವಿಚಾರಗೋಷ್ಟಿ / ಕೃಷಿ ವಿಜ್ಞಾನ ಪದವಿಗಷ್ಟೇ ಸೀಮತವಾಗಬಾರದು: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕೃಷಿ ವಿಜ್ಞಾನ ಪದವೀಧರರು ಬರೀ ಕೃಷಿ ಅಕಾರಿಗಳಾಗಬೇಕೆಂಬ ಆಕಾಂಕ್ಷೆಯಿಂದ ಕೆಲಸ ಮಾಡದೇ ಉತ್ತಮ ಕೃಷಿಕರಾಗಿಯೂ ತೊಡಗಿಸಿಕೊಳ್ಳಬೇಕಿದೆ. ರೈತರಿಗೆ ಇಂದಿನ ಆಧುನಿಕ ಕೃಷಿ ತಂತ್ರಜ್ಞಾನಗಳು ತಲುಪಿಸುವಲ್ಲಿ ಕೃಷಿ ವಿಜ್ಞಾನಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಗಾಂಧಿ ಕೃಷಿ ವಿವಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ, ಬೆಂಗಳೂರು ಕೃಷಿ ವಿವಿಯ ಬಿಎಸ್ಸಿ(ಕೃಷಿ) ಅಂತಿಮ ವರ್ಷದ ವಿದ್ಯಾರ್ಥಿಗಳ ಸ್ಟೂಡೆಂಟ್ ರೆಡಿ ಕಾರ್ಯಕ್ರಮದಡಿ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಸಮಾರೋಪದ ಅಂಗವಾಗಿ ಹಮ್ಮಿಕೊಂಡಿದ್ದ ಕೃಷಿ ಪರ್ವ, ಕೃಷಿ ನಾದ- ಕೃಷಿ ವಸ್ತು ಪ್ರದರ್ಶನ ಹಾಗೂ ವಿಚಾರಗೋಷ್ಟಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣದ ಅವಶ್ಯಕತೆ ಇದ್ದು, ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮಗಳು ಇದಕ್ಕೆ ಇಂಬು ನೀಡುತ್ತವೆ. ಶಿಬಿರದಲ್ಲಿ ಶಿಬಿರಾರ್ಥಿಗಳ ಮತ್ತು ಗ್ರಾಮಸ್ಥರ ಜೊತೆಗಿನ ಭಾವನಾತ್ಮಕ ಒಡನಾಟ ಸದಾ ಸ್ಮರಣೆಯಲ್ಲಿರುತ್ತದೆ. ಕೃಷಿ ಪದವಿ ಪಡೆದವರು ಅಕಾರಿಗಳಾಗುವುದಕ್ಕೆ ಹಾತೊರೆಯದೇ ತಮ್ಮದೇ ಜಮೀನಿನಲ್ಲಿ ಉತ್ತಮ ಕೃಷಿಕರಾಗಿ ಕಾರ್ಯ ನಿರ್ವಹಿಸಿದರೆ ಕೃಷಿಕರಿಗೆ ಮಾದರಿಯಾಗುತ್ತದೆ. ಕೃಷಿ ಪದವಿ ಪಡೆದವರು ರೈತರಿಗೆ ಕಾಲಕಾಲಕ್ಕೆ ಅಗತ್ಯ ಮಾಹಿತಿ ನೀಡುವುದು ಹಾಗೂ  ರೈತರೊಂದಿಗೆ ಸೌಜನ್ಯದಿಂದ ವರ್ತಿಸುವುದು ಮುಖ್ಯವಾಗಿದೆ ಎಂದರು.

ಕೃಷಿ ವಿವಿಯ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥ ಡಾ.ಎನ್.ಶ್ರೀನಿವಾಸ್ ಮಾತನಾಡಿ, ಕೃಷಿ ವಿವಿಯ 7ನೇ ಸೆಮಿಷ್ಟರ್  ಬಿಎಸ್ಸಿ(ಕೃಷಿ) ವಿದ್ಯಾರ್ಥಿಗಳಿಗೆ ತರಗತಿ ಪಾಠದೊಂದಿಗೆ ಪ್ರಾಯೋಗಿಕ ಅನುಭವ ನೀಡುವ ನಿಟ್ಟಿನಲ್ಲಿ ಹಾಗೂ ಕೌಶಲ್ಯ ರೂಢಿಸಿಕೊಳ್ಳಲು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಆದರೆ ಕೊವಿಡ್ ಸಮಯದಲ್ಲಿ ಈ ಶಿಬಿರಗಳನ್ನು ನಡೆಸುವುದು ಸವಾಲಾಗಿತ್ತು.  ಇಲ್ಲಿನ ಗ್ರಾಮಸ್ಥರ ನೆರವು ಸಹಕಾರದಿಂದ ಶಿಬಿರ ಯಶಸ್ವಿಯಾಗಿದೆ ಎಂದರು.

ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ಮಾತನಾಡಿ, ನಾವು ಈ ಹಿಂದೆ ಕಲಿತಿದ್ದ ಕೃಷಿ ಪದವಿಗೂ ಇಂದಿನ ಕೃಷಿ ಪದವಿಗೂ ವ್ಯತ್ಯಾಸವಿದ್ದು, ಇಂದು ಆಧುನಿಕ ಕೃಷಿ ಪದ್ದತಿಗಳು ಅಳವಡಿಕೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಉತ್ತಮ ಕೃಷಿಕರಾಗಿ, ಕೃಷಿ ತಂತ್ರಜ್ಞಾನ ಹೊಸ  ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸಿಕೊಂಡು ರೈತರಿಗೆ ಮಾಹಿತಿ ನೀಡಬೇಕಿದೆ ಎಂದರು.

ವಿದ್ಯಾರ್ಥಿನಿ ಕೀರ್ತನ ಶಿಬಿರದ ಸಮಗ್ರ ವರದಿ ಮಂಡಿಸಿದರು.

ಸಮಾರಂಭದಲ್ಲಿ  ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೃಷಿ ವಿವಿಯ ಸಹಾಯಕ ಪ್ರಾಧ್ಯಾಪಕರಾದ ಅರಣ್ಯ ಕೃಷಿ ವಿಭಾಗದ ಡಾ.ರಿಂಕು ಶರ್ಮ, ಜೇನು ಕೃಷಿ ವಿಭಾಗದ ಡಾ.ಬಿ.ವಿ.ಶ್ವೇತಾ, ಕೃಷಿ ಎಂಜಿನಿಯರಿಂಗ್ ವಿಭಾಗದ ಪಿ.ಎನ್.ಕೃಷ್ಣಮ್ಮ ರೈತರಿಗೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.

ಕಂಟನ ಕುಂಟೆ ಗ್ರಾ.ಪಂ ಅಧ್ಯಕ್ಷೆ ಶೋಭಾ ರಾಜಗೋಪಾಲ್ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಕೃಷಿ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕಿ ಎನ್.ಸುಶೀಲಮ್ಮ, ಪ್ರಗತಿಪರ ಕೃಷಿಕ ಶ್ರೀನಿವಾಸ ರೆಡ್ಡಿ, ಕಂಟನ ಕುಂಟೆ ಗ್ರಾ.ಪಂ ಉಪಾಧ್ಯಕ್ಷ ನಾಗರಾಜು, ಸದಸ್ಯ ರಾಮಚಂದ್ರ ರೆಡ್ಡಿ, ಪಿಡಿಓ ನಂದಿನಿ, ವಿಎಸ್‍ಎಸ್‍ಎನ್ ಅಧ್ಯಕ್ಷ ಜಯಚಂದ್ರ, ಉಪಾಧ್ಯಕ್ಷ ವೆಂಕಟರಾಜು, ಕಾರ್ಯದರ್ಶಿ ಲಕ್ಷ್ಮಮ್ಮ, ಮುಖಂಡರಾದ ಕೆ.ಎಂ. ಕೃಷ್ಣಮೂರ್ತಿ, ಸೋಮರುದ್ರ ಶರ್ಮ, ಅಪ್ಪಿ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

ಸಮಾರಂಭದ ಅಂಗವಾಗಿ ಮೂರು ತಿಂಗಳಿಂದ  ಕೃಷಿ ವಿದ್ಯಾರ್ಥಿಗಳಿಂದಲೇ ಬೆಳೆಸಲಾಗಿದ್ದ ಬೆಳೆ ಸಂಗ್ರಹಾಲಯ, ಕೃಷಿ ವಸ್ತು ಪ್ರದರ್ಶನವನ್ನು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!