ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನಗರದ ಸೌಂದರ್ಯಮಹಲ್, ವೈಭವ್ ಸಿನಿಮಾ ಹಾಗೂ ರಾಜ್‍ಕಮಲ್ ಚಿತ್ರಮಂದಿರದ ಮಾಲೀಕರು ಹಾಗೂ ಸಿಬ್ಬಂದಿ ವರ್ಗದಿಂದ ಮೋಂಬತಿಗಳನ್ನು ಬೆಳಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸೌಂದರ್ಯಮಹಲ್ ಚಿತ್ರಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ರಮಂದಿರದ ಮಾಲೀಕರಾದ ಟಿ.ವಸಂತ್ ಕುಮಾರ್, ವರನಟ ಡಾ.ರಾಜಕುಮಾರ್ ಕುಟುಂಬದ ಘನತೆಯನ್ನು ಉಳಿಸಿ ಬೆಳೆಸುವಲ್ಲಿ ಪುನೀತ್ ರಾಜ್‍ಕುಮಾರ್ ಅವರ ಪಾತ್ರ ದೊಡ್ಡದಾಗಿದೆ. ಚಿತ್ರರಂಗದಲ್ಲಷ್ಟೇ ಅಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಚಿತ್ರರಂಗದ ಬದುಕನ್ನು ಸಾರ್ಥಕಪಡಿಸಿಕೊಂಡಿದ್ದಾರೆ. ಕುಟುಂಬ ಸಮೇತ ನೋಡಬಹುದಾದ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುವುದರಲ್ಲಿ ಅವರು ಮೊದಲಿಗರಾಗಿದ್ದರು. ಅವರು ಚಿತ್ರರಂಗದಲ್ಲಿ ಇನ್ನೂ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದರೆ, ಕನ್ನಡ ಚಿತ್ರರಂಗ ಮತ್ತಷ್ಟು ಶ್ರೀಮಂತವಾಗುತ್ತಿತ್ತು. ಅವರ ನಿಧನ ಚಿತ್ರ ಪ್ರದರ್ಶಕರಿಗೂ ತುಂಬಲಾರದ ನಷ್ಟವಾಗಿದೆ ಎಂದು ಸ್ಮರಿಸಿದರು.
ತಾಲೂಕು ಶಿವರಾಜ್‍ಕುಮಾರ್ ಸೇನಾ ಸಮಿತಿಯ ತಾಲೂಕು ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ ಜಿ.ರಾಮು, ಚಿತ್ರಮಂದಿರದ ಟಿ.ಪ್ರಸನ್ನ ಕುಮಾರ್, ರವಿಕುಮಾರ್, ಚಿನ್ನಪ್ಪ, ರಿಯಾಜ್,ಎಜಿಕೆ ಗೋಪಾಲ್ ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ವೈಭವ್ ಸಿನಿಮಾ ಚಿತ್ರಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಚಿತ್ರಮಂದಿರದ ಮಾಲೀಕರಾದ ವೀರೇಗೌಡ, ವ್ಯವಸ್ಥಾಪಕ ನಾಗರಾಜ್, ಬೈರೆಗೌಡ, ಮುರುಳಿ, ಗೋಪಾಲ್ ಕೃಷ್ಣ.ಸಿ.ಎಂ ಮೌನಾಚರಿಸಿ ಶ್ರದ್ದಾಂಜಲಿ ಅರ್ಪಿಸಿದರು.
ರಾಜ್‍ಕಮಲ್ ಚಿತ್ರಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಚಿತ್ರಮಂದಿರದ ಮಾಲೀಕರಾದ ಕೆ.ಸಿ.ರುದ್ರೇಗೌಡ ಅವರು ಪುನೀತ್ ರಾಜ್‍ಕುಮಾರ್ ಅವರ ಸಾಧನೆಯನ್ನು ಹಾಗೂ ಡಾ.ರಾಜ್‍ಕುಮಾರ್ ಕುಟುಂಬದ ಒಡನಾಟವನ್ನು ಸ್ಮರಿಸಿದರು.
ವ್ಯವಸ್ಥಾಪಕ ಕೆ.ಎಸ್.ಹರೀಶ್ ಕುಮಾರ್, ಸಿಬ್ಬಂದಿಗಳಾದ ಆಂಜಿನಪ್ಪ, ರವಿಕುಮಾರ್, ರಾಮಚಂದ್ರಪ್ಪ, ಗೋಪಾಲ್,ಆನಂದ್, ಸುಬ್ರಮಣಿ, ಉಳ್ಳೂರಾಯ, ಉಪೇಂದ್ರ ಕುಮಾರ್ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……
 
				 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						