ದೊಡ್ಡಬಳ್ಳಾಪುರ: ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ 11 ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು (ನ.8) ಅವರ ಪುಣ್ಯ ಸ್ಮರಣೆ ಕಾರ್ಯ ನಡೆಯುತ್ತಿದೆ.
11ನೇ ದಿನದ ಪೂಜೆಯಲ್ಲಿ ಅಪ್ಪು ಕುಟುಂಬದವರು ಭಾಗಿ ಆಗಿದ್ದಾರೆ. ಭಾನುವಾರ (ನ.7) ರಾತ್ರಿಯಿಂದಲೇ ಈ ಕಾರ್ಯಕ್ಕೆ ಸಕಲ ಸಿದ್ಧತೆ ಶುರುವಾಗಿತ್ತು. ಇಂದು ಬೆಳಗ್ಗೆಯೇ ಸದಾಶಿವನಗರದಲ್ಲಿರುವ ಪುನೀತ್ ರಾಜ್‍ಕುಮಾರ್ ಅವರ ನಿವಾಸದಲ್ಲಿ ಪೂಜಾ ಕಾರ್ಯಗಳು ಆರಂಭ ಆಗಿವೆ.
ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ಅಭಿಮಾನಿಗಳು ನಗರದಲ್ಲಿರುವ ಸ್ನೇಹ ಭಾರತಿ ಫೌಂಡೇಶನ್ ಮಕ್ಕಳಿಗೆ, ಉಚಿತವಾಗಿ ಬ್ಯಾಗ್ ಹಾಗೂ ಊಟದ ವ್ಯವಸ್ಥೆ ಮಾಡಿಸುವ ಮೂಲಕ ಅಗಲಿದ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……