ದೊಡ್ಡಬಳ್ಳಾಪುರ: ಸಚಿವರಿಗಾಗಿ ಅಂಗನವಾಡಿಗೆ ಮತ್ತೆ ಬಂದ ಮಕ್ಕಳು / ಶಾಲಾವಧಿ ಮುಗಿದ ನಂತರ ಮಕ್ಕಳಿಗೆ ಹೂ ನೀಡಿ ಸ್ವಾಗತ ಕೋರಿದ ಸಚಿವರು…!

ದೊಡ್ಡಬಳ್ಳಾಪುರ: ಕೋವಿಡ್-19ರ ಪಾಸಿಟಿವಿಟಿ ದರ ಶೇ.2ರಷ್ಟು ಕಡಿಮೆ ಇರುವುದರಿಂದ ಹಾಗೂ ರಾಜ್ಯ ಮಟ್ಟದ ತಜ್ಞರ ಸಮಿತಿಯು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಅಂಗನವಾಡಿ ಕೇಂದ್ರಗಳನ್ನು ತೆರೆಯಲು ತಿಳಿಸಿರುವ ಹಿನ್ನೆಲೆ, 2021ರ ನವೆಂಬರ್ 08ರಂದು ತಾಲೂಕಿನ ಆದಿನಾರಾಯಣ ಹೊಸಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳನ್ನು ಪುನಃ ಕೇಂದ್ರಕ್ಕೆ ಆಹ್ವಾನಿಸುವ ಮುಖಾಂತರ ಚಾಲನೆ ನೀಡುವ ಕಾರ್ಯಕ್ರಮ ನಿಗದಿ ಶಾಲಾ ಅವಧಿ ಮುಗಿದ ನಂತರ, ಮತ್ತೆ ಸಚಿವರು ಮಕ್ಕಳನ್ನು ಸ್ವಾಗತ ಕೋರಿದ ಘಟನೆ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಡೆದ ಆದಿನಾರಾಯಣಹೊಸಹಳ್ಳಿ ಗ್ರಾಮದ ಅಂಗನವಾಡಿ ಪುನರ್ ಆರಂಭಕ್ಕೆ ಚಾಲನೆ, ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್ ನೂತನ ಕಟ್ಟಡ ಉದ್ಘಾಟಿಸಲಾಯಿತು.

ಅಂಗನವಾಡಿ ಅವಧಿ 10 ರಿಂದ 12ರ ವರೆಗೆ ನಡೆಸಲು ಆದೇಶಿಸಲಾಗಿದ್ದರು, ಶಾಲಾ ಅವಧಿ ಮುಗಿದ ನಂತರ ಮಕ್ಕಳನ್ನು ಮತ್ತೆ ಕರೆಸಿ. ಸಚಿವರು 3.30 ಗಂಟೆಗೆ ಬಂದ ನಂತರ ಮಕ್ಕಳಿಗೆ ಹೂ ನೀಡಿ ಮತ್ತೆ ಅಂಗನವಾಡಿಗೆ ಸ್ವಾಗತ ಕೋರಿದ್ದು ಪೋಷಕರ ಬೇಸರಕ್ಕೆ ಕಾರಣವಾಯಿತು.

ಈ ವೇಳೆ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿನವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವ ಹಾಲಪ್ಪ ಬಸಪ್ಪ ಆಚಾರ್, ರಾಜ್ಯ ಮಟ್ಟದ ತಜ್ಞರ ಸಮಿತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ರಾಜ್ಯಾದ್ಯಂತ 66,361 ಅಂಗನವಾಡಿ ಕೇಂದ್ರಗಳಲ್ಲಿ ತರಗತಿಗಳನ್ನು ಆರಂಭಿಸಲಾಗಿದೆ. ತಾಲ್ಲೂಕಿನ ಆದಿನಾರಾಯಣಹೊಸಹಳ್ಳಿ ಅಂಗನವಾಡಿ ಕೇಂದ್ರದ ಆರಂಭವನ್ನು ಉದ್ಘಾಟಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 12 ರವರೆಗೆ ಅಂಗನವಾಡಿಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಈಗಾಗಲೆ ಅಂಗನವಾಡಿ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿದ್ದು,ಮಕ್ಕಳ ಪೋಷಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಇದರೊಂದಿಗೆ ಮಕ್ಕಳ ಪೋಷಕರ ಒಪ್ಪಿಗೆ ಪತ್ರವನ್ನು ಪಡೆಯುವಂತೆ ಸೂಚಿಸಲಾಗಿದೆ. ಮಕ್ಕಳ ಆರೋಗ್ಯ ಏರುಪೇರು ಆದಲ್ಲಿ ಅಂಗನವಾಡಿ ಕಾರ್ಯಕರ್ತರು ಮೊದಲು ಪೋಷಕರ ಗಮನಕ್ಕೆ ತರಬೇಕು. ಇದರೊಂದಿಗೆ ಮಕ್ಕಳ ಆರೋಗ್ಯ ಏರುಪೇರಾದರೆ ಶೀಘ್ರವೇ  ಅಗತ್ಯ  ಚಿಕಿತ್ಸೆ ನೀಡುವಲ್ಲಿ ಆಯಾ ಜಿಲ್ಲಾಡಳಿತಗಳು ಕ್ರೀಯಾತ್ಮಕವಾಗಿ ಕಾರ್ಯವಹಿಸಲು ಸೂಚನೆ ನೀಡಲಾಗಿದೆ. ಈ ಕುರಿತು ತಾಲ್ಲೂಕು ಆಡಳಿತ, ಸಂಬಂಧಿತ ಇಲಾಖಾ ಅಧಿಕಾರಿಗಳು ಚುರುಕಾಗಿ ಕಾರ್ಯ ನಿರ್ವಹಿಸಬೇಕು ಎಂದರು. 

ಪೌಷ್ಠಿಕ ಆಹಾರ ನೇರವಾಗಿ ಮನೆಗೆ: ಮುನ್ನೆಚರಿಕೆ ಕ್ರಮವಾಗಿ ಅಂಗನವಾಡಿಯಲ್ಲಿ ಸಿದ್ದ ಆಹಾರಗಳನ್ನು ನೀಡುವುದನ್ನು ನಿಲ್ಲಿಸಲಾಗಿದೆ. ನೇರವಾಗಿ ಮಕ್ಕಳ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್-19 ಸಂದರ್ಭದಿಂದಲೂ ಈ ಕಾರ್ಯ ಸುಗುಮವಾಗಿ ನಡೆಯುತ್ತಾ ಬಂದಿದೆ. ಕ್ಷೀರ ಭಾಗ್ಯ, ಸೃಷ್ಟಿ ಯೋಜನೆ, ಮಾತೃಪೂರ್ಣ ಯೋಜನೆಗಳ ಫಲಾನುಭವಿಗಳಿಗೂ ಮನೆಗಳಿಗೆ ಪೌಷ್ಠಿಕ ಆಹಾರ ತಲುಪುತಿದೆ. ಇದರೊಂದಿಗೆ ತೀವ್ರ ಅಪೌಷ್ಠಿಕತೆ ಇರುವ ಮಕ್ಕಳಿಗೆ ಪುನರ್ವಸತಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಮೂರು ತಿಂಗಳಿಗೊಮ್ಮ ಆರೋಗ್ಯ ತಪಾಸಣೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ರಾಜ್ಯ ಮಟ್ಟದ ತಜ್ಞರ ತಾಂತ್ರಿಕ ಸಮಿತಿಯ ನೀಡಿರುವ ಮಾರ್ಗಸೂಚಿ ಅನ್ವಯದಂತೆ ಅಂಗನವಾಡಿ ಆರಂಭವಾಗಿವೆ ಎಂದರು. 

ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ನಮ್ಮ ಜಿಲ್ಲೆಯಲ್ಲೆ ಅಂಗನವಾಡಿ ಕೇಂದ್ರ ಅಂಗನವಾಡಿ ಪುನರ್ ಆರಂಭದ ಉದ್ಘಾಟನೆ ಮಾಡಿ ಚಾಲನೆ ನೀಡಿರುವುದು ಸಂತಸ ತಂದಿದೆ. ಜಿಲ್ಲೆಯಲ್ಲಿ 1,230 ಅಂಗನವಾಡಿ ಕೇಂದ್ರಗಳು ಇಂದು ಆರಂಭವಾಗಿವೆ.ಎಲ್ಲಾ ಅಂಗನವಾಡಿ ಕೇಂದ್ರಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಸರ್ಕಾರದ ಮಾರ್ಗ ಸೂಚಿಗಳಂತೆ ಮಕ್ಕಳ ಆರೋಗ್ಯ ತಪಾಸಣೆ, ಆರೋಗ್ಯ ಏರುಪೇರಾದಾಗ ಸೂಕ್ತ ಚಿಕಿತ್ಸೆ ನೀಡಿ ಕೂಡಲೆ ಫೋಷಕರಿಗೆ ತಿಳಿಸಿ. ಈ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಆಡಳಿತ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜು, ನಗರಸಭೆ ಅಧ್ಯಕ್ಷೆ ಎಸ್.ಸುಧಾರಾಣಿ ಲಕ್ಷ್ಮಿನಾರಾಯಣ್, ಟಿಎಪಿಎಂಸಿಎಸ್ ಅಧ್ಯಕ್ಷ ಡಿ.ಸಿದ್ದರಾಮಯ್ಯ, ಕೆಎಂಎಫ್ ನಿರ್ದೆಶಕ ಬಿ.ಸಿ.ಆನಂದ್ ಕುಮಾರ್, ಸಿಡಿಪಿಒ ಅನಿತಾಲಕ್ಷ್ಮೀ, ಬಿಜೆಪಿ ನಗರ ಅಧ್ಯಕ್ಷ ಎಚ್.ಎಸ್.ಶಿವಶಂಕರ್, ತಾಲ್ಲೂಕು ಅಧ್ಯಕ್ಷ ನಾಗರಾಜು ಇದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!