ದೊಡ್ಡಬಳ್ಳಾಪುರ: ನ.10ರಂದು ನಿಗದಿಯಾಗಿದ್ದ ನಗರಸಭೆ ನೂತನ ಕಛೇರಿ ಕಟ್ಟಡ ಉದ್ಘಾಟನೆ ಹಾಗೂ ಗೃಹಭಾಗ್ಯ ಯೋಜನೆಯಡಿ ಖಾಯಂ ಪೌರಕಾರ್ಮಿಕರಿಗೆ ವಸತಿ ಸಮುಚ್ಚಯದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ವಿಧಾನ ಪರಿಷತ್ತಿನ ಚುನಾವಣೆ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ತಿಳಿಸಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಯ ಕ್ಷೇತ್ರಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದೆ.
ತಕ್ಷಣದಿಂದ ಜಾರಿಗೆ ಬರುವಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಕಾರ್ಯಕ್ರಮವನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿರುತ್ತದೆ ಹಾಗೂ ಎಲ್ಲಾ ಸರ್ಕಾರಿ ಸಭೆ ಸಮಾರಂಭಗಳನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..