ಮೈಸೂರು: ಟಿಪ್ಪು ಜಯಂತಿ ವೇಳೆ ಮಡಿಕೇರಿ ನಗರದಲ್ಲಿ ನಡೆದ ಘರ್ಷಣೆಯಲ್ಲಿ ಮೃತಪಟ್ಟ ವಿಶ್ವಹಿಂದೂ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವಪ್ಪಂಡ ಕುಟ್ಟಪ್ಪ ಸ್ಮರಣೆಯನ್ನು ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾಡುತ್ತಿದ್ದು, ಈ ಸಂಬಂಧ ವಿವಿಧ ದೇಗುಲಗಳಲ್ಲಿ ಪೂಜಾ ಕೈಂಕರ್ಯ ನಡೆಸಲಾಗುತ್ತಿದೆ.
ಈ ನಡುವೆ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಿಂದೂ ಸಂಘಟನೆಯ ಪ್ರಮುಖರನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ. ಮಡಿಕೇರಿ ನಗರದಲ್ಲಿರುವ ಓಂಕಾರೇಶ್ವರ ಮತ್ತು ಚೌಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಹೊರ ಬಂದ ಹಿಂದೂ ಪರ ಸಂಘಟನೆಯ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕುಟ್ಟಪ್ಪ ಸ್ಮರಣಾರ್ಥ ಶಾಂತಿ ಪೂಜೆಯನ್ನು ಏರ್ಪಡಿಸಲಾಗಿತ್ತು. ಈ ಸಂಬಂಧ ಹಿಂದೂ ಸಂಘಟನೆಯ ಪ್ರಮುಖರು ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ದೇಗುಲದಿಂದ ಹೊರ ಬರುತ್ತಿದ್ದಂತೆಯೇ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಿಂದೂ ಸಂಘಟನೆಯ ಮುಖಂಡರನ್ನು ಬಂಧಿಸಲಾಯಿತು ಎಂದು ಕೋಸ್ಟಲ್ ಮಿರರ್ ವರದಿ ತಿಳಿಸಿದೆ.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತಂದಿದ್ದು, ತೀವ್ರ ವಿರೋಧವಾಗಿ ರಾಜ್ಯದಲ್ಲಿ ಕೋಮು ಘರ್ಷಣೆ ಉಂಟಾಗಿತ್ತು. ಆದರೆ 2019ರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಆದಿಕಾರಕ್ಕೆ ಬಂದ ನಂತರ ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……