ದಲಿತರ ಕುರಿತು ವಿವಾದಿತ ಹೇಳಿಕೆ: ದೊಡ್ಡಬಳ್ಳಾಪುರದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿಗೆ ಹೋಗಿದ್ದಾರೆ ಎನ್ನುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಗ್ರಾಮಾಂತರ ಮಂಡಲದ ವತಿಯಿಂದ ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಬಿಜೆಪಿ ಎಸ್ ಸಿ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ದೇವರಾಜು.ಎಚ್ ಕುರುಬರಹಳ್ಳಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಈ ದೇಶದ ಜನತೆಗೆ ಮಾತನಾಡುವ ಸ್ವಾತಂತ್ರ್ಯ ಕೊಟ್ಟರು. ಆದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಸಮುದಾಯಕ್ಕೆ ದೊಡ್ಡ ಅವಮಾನ ಮಾಡಿದ್ದಾರೆ ಎಂದು ಹರಿಹಾಯ್ದರು.

ತಾಲೂಕು ಅಧ್ಯಕ್ಷ ನಾಗರಾಜ್ ಮಾತನಾಡಿ, ಕಾಂಗ್ರೆಸ್ ಅಂದರೆ ದಲಿತರು. ದಲಿತರು ಅಂದರೆ ಕಾಂಗ್ರೆಸ್ ಅನ್ನೋ ಸಂದರ್ಭ ಇತ್ತು. ದಲಿತರನ್ನೇ ಮತ ಬ್ಯಾಂಕ್ ಮಾಡಿಕೊಂಡು ದೇಶವನ್ನ ಆಳುತ್ತಾ ಬಂದಿತ್ತು. ಆದರೀಗ ಒಬ್ಬಬ್ಬ ದಲಿತರೂ ಕಾಂಗ್ರೆಸ್ ತೊರೆಯುತ್ತಿದ್ದಾರೆ. ಈಗ ಕಾಂಗ್ರೆಸ್ ದಲಿತರನ್ನ ಕಳೆದುಕೊಂಡು ಸೋಲುತ್ತಾ ಬಂದಿದೆ. ಅಧಿಕಾರವನ್ನೂ ಕಳೆದುಕೊಂಡಿದೆ. ಅದಕ್ಕಾಗಿ ದಲಿತರ ವಿರುದ್ಧ ಹೇಳಿಕೆ ಕೊಡುತ್ತಿದೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರು ಬೇಷರತ್ ಕ್ಷಮೆಯನ್ನು ಕೇಳುವುದರ ಜೊತೆಗೆ ಹೇಳಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಮನವಿ ಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ  ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ, ಪ್ರಧಾನ ಕಾರ್ಯದರ್ಶಿಗಳಾದ ಶಿವನಂದ ರೆಡ್ಡಿ,  ರಾಜಘಟ್ಟ ಕಾಂತರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಅಶ್ವಥ್ ನಾರಾಯಣ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಖಜಾಂಚಿ ಸಿ.ನಾರಾಯಣಸ್ವಾಮಿ ನಗರ ಅಧ್ಯಕ್ಷ  ಶಿವಶಂಕರ್, ನಗರಸಭೆ ಅಧ್ಯಕ್ಷೆ  ಸುಧಾರಾಣಿ ಲಕ್ಷ್ಮಿ ನಾರಾಯಣ್, ರಾಜ್ಯ ಸಾಮಾಜಿಕ ಜಾಲತಾಣದ ಪ್ರಮುಖರಾದ  ಶಿವಾನಂದ ರೆಡ್ಡಿ ಜಿಲ್ಲಾ ಕಾರ್ಯದರ್ಶಿ ರಾಮ್ ಕಿಟ್ಟಿ,  ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ನಾಗಸಂದ್ರ, ನಗರಸಭಾ ಸದಸ್ಯ ಶಿವಣ್ಣ, ರೈತ ಮೋರ್ಚಾ ಅಧ್ಯಕ್ಷ ಕೋಡಿ ನರಸಿಂಹಮೂರ್ತಿ, ಹಿರಿಯ ಮುಖಂಡ ಮಲ್ಲಪ್ಪ, ಬಾಲಕೃಷ್ಣ, ಮುನಿಯಪ್ಪ ತಳಗವಾರ, ಸದಸ್ಯರಾದ ಚಾಂದ್ ಪಾಷ, ಪ್ರಭು, ನೇಕಾರ ಪ್ರಕೋಷ್ಠ ನಗರ ಸಂಚಾಲಕ ಮಂಜುನಾಥ್, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹಾದ್ರಿಪುರ, ನಾಗರಾಜು ಕೊಟ್ಟಿಗೆ ಮಾಚೇನಹಳ್ಳಿ, ಉಪಾಧ್ಯಕ್ಷರಾದ ವೆಂಕಟರಾಜು, ದೇವರಾಜು ಹೆಚ್ ಕುರುಬರಹಳ್ಳಿ, ನಾಗರಾಜು, ಶ್ರೀಧರ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!