ದೊಡ್ಡಬಳ್ಳಾಪುರ: ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿಗೆ ಹೋಗಿದ್ದಾರೆ ಎನ್ನುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಗ್ರಾಮಾಂತರ ಮಂಡಲದ ವತಿಯಿಂದ ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಬಿಜೆಪಿ ಎಸ್ ಸಿ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ದೇವರಾಜು.ಎಚ್ ಕುರುಬರಹಳ್ಳಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಈ ದೇಶದ ಜನತೆಗೆ ಮಾತನಾಡುವ ಸ್ವಾತಂತ್ರ್ಯ ಕೊಟ್ಟರು. ಆದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಸಮುದಾಯಕ್ಕೆ ದೊಡ್ಡ ಅವಮಾನ ಮಾಡಿದ್ದಾರೆ ಎಂದು ಹರಿಹಾಯ್ದರು.
ತಾಲೂಕು ಅಧ್ಯಕ್ಷ ನಾಗರಾಜ್ ಮಾತನಾಡಿ, ಕಾಂಗ್ರೆಸ್ ಅಂದರೆ ದಲಿತರು. ದಲಿತರು ಅಂದರೆ ಕಾಂಗ್ರೆಸ್ ಅನ್ನೋ ಸಂದರ್ಭ ಇತ್ತು. ದಲಿತರನ್ನೇ ಮತ ಬ್ಯಾಂಕ್ ಮಾಡಿಕೊಂಡು ದೇಶವನ್ನ ಆಳುತ್ತಾ ಬಂದಿತ್ತು. ಆದರೀಗ ಒಬ್ಬಬ್ಬ ದಲಿತರೂ ಕಾಂಗ್ರೆಸ್ ತೊರೆಯುತ್ತಿದ್ದಾರೆ. ಈಗ ಕಾಂಗ್ರೆಸ್ ದಲಿತರನ್ನ ಕಳೆದುಕೊಂಡು ಸೋಲುತ್ತಾ ಬಂದಿದೆ. ಅಧಿಕಾರವನ್ನೂ ಕಳೆದುಕೊಂಡಿದೆ. ಅದಕ್ಕಾಗಿ ದಲಿತರ ವಿರುದ್ಧ ಹೇಳಿಕೆ ಕೊಡುತ್ತಿದೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಅವರು ಬೇಷರತ್ ಕ್ಷಮೆಯನ್ನು ಕೇಳುವುದರ ಜೊತೆಗೆ ಹೇಳಿಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಮನವಿ ಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ, ಪ್ರಧಾನ ಕಾರ್ಯದರ್ಶಿಗಳಾದ ಶಿವನಂದ ರೆಡ್ಡಿ, ರಾಜಘಟ್ಟ ಕಾಂತರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಅಶ್ವಥ್ ನಾರಾಯಣ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಖಜಾಂಚಿ ಸಿ.ನಾರಾಯಣಸ್ವಾಮಿ ನಗರ ಅಧ್ಯಕ್ಷ ಶಿವಶಂಕರ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿ ನಾರಾಯಣ್, ರಾಜ್ಯ ಸಾಮಾಜಿಕ ಜಾಲತಾಣದ ಪ್ರಮುಖರಾದ ಶಿವಾನಂದ ರೆಡ್ಡಿ ಜಿಲ್ಲಾ ಕಾರ್ಯದರ್ಶಿ ರಾಮ್ ಕಿಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ನಾಗಸಂದ್ರ, ನಗರಸಭಾ ಸದಸ್ಯ ಶಿವಣ್ಣ, ರೈತ ಮೋರ್ಚಾ ಅಧ್ಯಕ್ಷ ಕೋಡಿ ನರಸಿಂಹಮೂರ್ತಿ, ಹಿರಿಯ ಮುಖಂಡ ಮಲ್ಲಪ್ಪ, ಬಾಲಕೃಷ್ಣ, ಮುನಿಯಪ್ಪ ತಳಗವಾರ, ಸದಸ್ಯರಾದ ಚಾಂದ್ ಪಾಷ, ಪ್ರಭು, ನೇಕಾರ ಪ್ರಕೋಷ್ಠ ನಗರ ಸಂಚಾಲಕ ಮಂಜುನಾಥ್, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹಾದ್ರಿಪುರ, ನಾಗರಾಜು ಕೊಟ್ಟಿಗೆ ಮಾಚೇನಹಳ್ಳಿ, ಉಪಾಧ್ಯಕ್ಷರಾದ ವೆಂಕಟರಾಜು, ದೇವರಾಜು ಹೆಚ್ ಕುರುಬರಹಳ್ಳಿ, ನಾಗರಾಜು, ಶ್ರೀಧರ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……