ವಿದ್ಯುತ್ ಕಾರಿಡಾರ್ಗೆ ಒಳಪಡುವ ರೈತರಿಗೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ

ದೊಡ್ಡಬಳ್ಳಾಪುರ: ಬೃಹತ್ ಪ್ರಮಾಣದ ವಿದ್ಯುತ್ ಲೈನ್ ಹಾದುಹೋಗುವ ಮಾರ್ಗದ ರೈತರ ಭೂಮಿಗೆ ಸೂಕ್ತ ಪರಿಹಾರ ನೀಡುವಂತೆ ಹಾಗೂ ರೈತರಿಗೆ ಯೋಜನೆಯ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ತಾಲೂಕು ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ನಗರದ ಪ್ರವಾಸಿ ಮಂದಿರ ವೃತ್ತದಿಂದ ಟ್ರ್ಯಾಕ್ಟರ್ ಹಾಗೂ ಬೈಕ್ ರ್ಯಾಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿಯವರೆಗೆ ಆಗಮಿಸಿದ ನೂರಾರು ರೈತರು ತಾಲೂಕು ಕಚೇರಿಯಲ್ಲಿ ಪ್ರತಿಭಟನೆ ಆರಂಭಿಸಿದರು. ಉನ್ನತ ಅಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗೆ ಪರಿಹಾರ ಸೂಚಿಸದ ಹೊರತು ನಿರ್ಗಮಿಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು. 

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ  ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಜಿಂಕೆಬಚ್ಚಹಳ್ಳಿ ಸತೀಶ್, ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಕ್ಕೆ ಹಾಗೂ ತೊಂಡೆ ಬಾವಿಯಿಂದ ದೊಡ್ಡಬಳ್ಳಾಪುರಕ್ಕೆ ಸಂಪರ್ಕಿಸಲು ಬೃಹತ್ ಪ್ರಮಾಣದ ವಿದ್ಯುತ್ ಲೈನ್ ಮೂಲಕ  ವಿದ್ಯುತ್ ಕಾರಿಡಾರ್ಗಳನ್ನು ನಿರ್ಮಿಸಲಾಗುತ್ತಿದೆ. ಈ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ದೊಡ್ಡಬಳ್ಳಾಪುರ ತಾಲೂಕಿನ ತಳಗವಾರ, ಕೋಳೂರು, ಕಂಟನಕುಂಟೆ, ಅರಳುಮಲ್ಲಿಗೆ, ಅಣಗಲಪುರ ಮುಂತಾದ ಸುಮಾರು 20 ಗ್ರಾಮಗಳ ಮೂಲಕ ಹಾದು ಹೋಗಿದ್ದ ಅಲ್ಪ ಪ್ರಮಾಣದ ವಿದ್ಯುತ್ ಲೈನ್ಗೆ ಬದಲಾಗಿ ಬೃಹತ್ ಕಂಬಗಳು ಹಾಗೂ ಬಹು ಮಾರ್ಗದ ಲೈನ್ ಅಳವಡಿಸಲು ವಿದ್ಯುತ್ ಇಲಾಖೆ ಮುಂದಾಗಿದೆ.  ಹಲವಾರು ಕಾರಣಗಳಿಂದಾಗಿ ರೈತರಿಗೆ ಈಗ ಉಳಿದಿರುವುದೇ ತುಂಡು ಭೂಮಿ. ಅಲ್ಪಸ್ವಲ್ಪ ಕೃಷಿ ಭೂಮಿಯಲ್ಲಿ ಬೃಹತ್ ಗಾತ್ರದ ವಿದ್ಯುತ್ ಕಂಬಗಳನ್ನು ಅಳವಡಿಸಿದರೆ ಕೃಷಿ ಮಾಡಲು ಸಾಧ್ಯವೇ ಇಲ್ಲದಾಗಲಿದೆ. ಈ ಕಾಮಗಾರಿ ಕೆಪಿಟಿಸಿಎಲ್ ಮಾಡುತ್ತಿದೆಯೋ, ಗ್ರೀಡ್ ಮಾಡುತ್ತಿದೆಯೋ ಮಾಹಿತಿಯೇ ಇಲ್ಲವಾಗಿದೆ. ರೈತರಿಗೆ ಯಾವುದೇ ಮಾಹಿತಿ ನೀಡದೆ ಕಂಬಗಳನ್ನು ಅಳವಡಿಸಲು ಗುಂಡಿಗಳನ್ನು ತೋಡಲು ಮುಂದಾಗಿರುವುದು ಖಂಡನಿಯ. ಭೂಮಿ ಕಳೆದುಕೊಳ್ಳುವ ರೈತರಿಗೆ ನಿಯಮದ ಪ್ರಕಾರ ಸೂಕ್ತ ಪರಿಹಾರ ನೀಡದೆ ಹಾಗೂ ರೈತರ ಅನುಮತಿ ಇಲ್ಲದೆ ಜಮೀನಿಗೆ ಪ್ರವೇಶಿಸಿ ಗುರುತು ಮಾಡುತ್ತಿರುವುದು ಖಂಡನೀಯ. ಕಂದಾಯ ಇಲಾಖೆ ಅಕಾರಿಗಳು ಭೂಮಿ ಸರ್ವೆ ನಡೆಸಿ ಪರಿಹಾರ ನಿಗದಿ ಮಾಡಬೇಕಿದೆ, ಇದನ್ನು ಹೊರತು ಪಡಿಸಿ ಬಲವಂತದಿಂದ ಕಾಮಗಾರಿ ನಡೆಸಲು ಮುಂದಾದರೆ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್ ಮಾತನಾಡಿ, ಗೌರಿಬಿದನೂರಿನಿಂದ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶ ಮತ್ತು ತೊಂಡೆಬಾವಿಯಿಂದ ದೊಡ್ಡಬಳ್ಳಾಪುರಕ್ಕೆ 220 ರಿಂದ 400ಕೆವಿ ವಿದ್ಯುತ್ ಕಾರಿಡಾರ್ ಮಾರ್ಗಗಳನ್ನು ಮಾಡಲಾಗುತ್ತಿದೆ. ಇದರ ಕುರಿತು ರೈತರಿಗೆ ಮಾಹಿತಿಯೇ ನೀಡದೆ, ಜಮೀನುಗಳಿಗೆ ಅತಿಕ್ರಮ ಪ್ರವೇಶಮಾಡಿ ಗುರುತು ಮಾಡುತ್ತಿದ್ದಾರೆ.

ಈ ಮುಂಚೆ ಅಳವಡಿಸಿದ ಕಂಬಗಳಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿಲ್ಲ. ನಿಯಮಗಳ ಅನ್ವಯ ಪರಿಹಾರ ನೀಡದೆ ಕಂಬಗಳ ಅಳವಡಿಕೆಗೆ ಮುಂದಾಗಿರುವುದು ಸರಿಯಲ್ಲ,  ಕಂಬಗಳನ್ನು ಹಾಕುವ ಜಾಗದಲ್ಲಿ ತೆಂಗು, ಅಡಿಕೆ ಮೊದಲಾದ ಬೆಳೆ ಬೆಳೆಯಲು ಆಗುವುದಿಲ್ಲ. ಕೊಳವೆ ಬಾವಿ ಸಹ ಕೊರೆಸಲು ಆಗುವುದಿಲ್ಲ. ಇದಲ್ಲದೇ ವಿದ್ಯುತ್ ಶಾಖ್ಗಳು ಆಗುವ ಸಂಭವಗಳು ಇವೆ. ರೈತರ ಪರ ಎನ್ನುವ ಸರ್ಕಾರಗಳು ರೈತರ ಸಂಕಷ್ಟ ಅರ್ಥಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ದತ್ತಾತ್ರೇಯ ಪಾಟೀಲ್ ಪ್ರತಿಕ್ರಿಯಿಸಿ, ರೈತರ ಮನವಿಯನ್ನು ಮೇಲಕಾರಿಗಳ ಗಮನಕ್ಕೆ  ತಂದು ಸೂಕ್ತ ಕ್ರಮ ವಹಿಸಲಾಗುವುದು. ಅಲ್ಲಿಯವರೆಗೆ ಯಾವುದೇ ಕಾಮಗಾರಿ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ತಹಸೀಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ, ಕೆಪಿಟಿಸಿಎಲ್ ಅಧಿಕಾರಿಗಳು ಸಧ್ಯಕ್ಕೆ ಯಾವುದೇ ಕಾಮಗಾರಿ ಕೈಗೊಳ್ಳುವುದಿಲ್ಲ ಎನ್ನುವ ಭರವಸೆ ನೀಡಿದ್ದಾರೆ. ರೈತರಿಗೆ ಪರಿಹಾರ ನೀಡುವ ಕುರಿತು ಜಿಲ್ಲಾಧಿಕಾರಿಗಳು ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ರೈತರ ಮುಖಂಡರಾದ ಸುಲೋಚನಮ್ಮ ಹರೀಶ್,ಉಮಾದೇವಿ, ಸತೀಶ್, ಮುನಿ ನಾರಾಯಣಪ್ಪ, ನಾರಾಯಣಸ್ವಾಮಿ, ಮಾದೇವ, ಶಿರವಾರ ರವಿ, ಶಾಂತಣ್ಣ ಸೇರಿದಂತೆ ವಿದ್ಯುತ್ ಲೈನ್ ಹಾದು ಹೋಗುವ ಗ್ರಾಮಗಳ ರೈತರು ಭಾಗವಹಿಸಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ ಎಂದು ವಿಜಯಲಕ್ಷ್ಮಿ ದರ್ಶನ್ ಕಿಡಿ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117208"]
error: Content is protected !!