ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2021-22ನೇ ಸಾಲಿನ ಅರಿವು ಸಾಲ ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಅಥವಾ ನೀಟ್ ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ / ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾಗುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ https://kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ್ ಕಾಪಿ ಹಾಗೂ ಇಂಡೆಮಿನಿಟಿ ಬಾಂಡ್ ಅನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ನಂ. 1599, ವೈ.ಎನ್. ಬಿಲ್ಡಿಂಗ್, ಹೊಸ ಬಸ್‌ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂ.ಸಂ.: 080-27681786 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……