ದೊಡ್ಡಬಳ್ಳಾಪುರ: ಹವಾಮಾನ ವೈಪರೀತ್ಯದಿಂದ ಬೆಳಗಿನ ಜಾವದಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವ್ಯಾಪಾರ ವಹಿವಾಟು ಮಂದವಾಗುವಂತೆ ಮಾಡಿದೆ.
ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ದಟ್ಟ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ಸೂರ್ಯ ಮೋಡದ ಮರೆಯಿಂದ ಹೊರಬಂದಿಲ್ಲ.
ಕೊಯ್ಲಿಗೆ ಬಂದಿರುವ ರಾಗಿ, ಜೋಳ ಮತ್ತು ಇನ್ನಿತರ ಬೆಳೆಗಳು ನೀರು ಬಡಿದು ರೈತನನ್ನು ಚಿಂತೆಗೆ ದೂಡಿವೆ. ಗುರುವಾರ ಸಂಜೆವರೆಗೂ ಮಳೆ ಮುಂದುವರಿದಿದೆ.
ಮಳೆ ಮತ್ತು ತಂಪು ಹವೆಯಿಂದಾಗಿ ಮಕ್ಕಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಾಲುಗಟ್ಟಿ ನಿಲ್ಲುವಂತಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ದೊರೆತಿದೆ. ದಕ್ಷಿಣ ಒಳನಾಡು ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……