ತಿರುವನಂತಪುರಂ: ಪ್ರಸಿದ್ಧ ಶಬರಿಮಲೆ ದೇವಸ್ಥಾನವು ಮಂಡಲ ಮಾಸದ ಪ್ರಯುಕ್ತ ನವೆಂಬರ್ 15ರಂದು ಬಾಗಿಲು ತೆರೆಯಲಿದೆ.
ದರ್ಶನಕ್ಕೆ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳದ ಭಕ್ತರಿಗಾಗಿ ನೀಲಕ್ಕಲ್‌ನಲ್ಲಿ ಐದು ಬುಕ್ಕಿಂಗ್ ಕೌಂಟರ್ ತೆರೆಯಲಾಗಿದೆ.
ದೇವಾಲಯಕ್ಕೆ ಬರುವ ಭಕ್ತರಿಗೆ ಎರಡು ಡೋಸ್ ಲಸಿಕೆ ಪಡೆದಿರುವ ದಾಖಲೆ ಅಥವಾ 72 ಗಂಟೆಗಳೊಳಗೆ ಮಾಡಿಸಲಾಗಿರುವ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ.
ಅಲ್ಲದೆ ನೀಲಕ್ಕಲ್‌ನಲ್ಲೇ ಕೋವಿಡ್ ಪರೀಕ್ಷಾ ಕೇಂದ್ರಗಳನ್ನೂ ತೆರೆಯಲಾಗಿದ್ದು, ಅಲ್ಲಿ ಪರೀಕ್ಷೆ ಮಾಡಿಸಿದವರಿಗೆ 3 ಗಂಟೆಗಳೊಳಗೆ ವರದಿ ನೀಡುವುದಾಗಿಯೂ ತಿಳಿಸಲಾಗಿದೆ.
ಡಿ.26ರವರೆಗೆ ಒಟ್ಟು 41 ದಿನಗಳ ಕಾಲ ದೇವರ ದರ್ಶನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಿದ್ಧತೆ ನಡೆಸಿಕೊಂಡಿದೆ. ಪ್ರತಿದಿನ 30 ಸಾವಿರ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……