ಬೆಂ.ಗ್ರಾ.ಜಿಲ್ಲೆ: ಪಶುಸಂಗೋಪನೆ ಇಲಾಖೆ ಹಾಗು ಮೀನುಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯಾಪ್ತಿಗೆ ಒಳಪಡುವ ಎಲ್ಲಾ ಬ್ಯಾಂಕುಗಳು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಅರ್ಹ ರೈತರಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನವನ್ನು ಹಮ್ಮಿಕೊಂಡಿದೆ.
ಭಾರತ ಸರ್ಕಾರದ ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆಯು ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸುಬುಗಳನ್ನು ಕೈಗೊಳ್ಳಲು ಅವಶ್ಯಕತೆಯಿರುವ ದುಡಿಮೆ ಬಂಡವಾಳ(working Capital)ವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಅರ್ಹ ರೈತರಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನವನ್ನು 2021ರ ನವೆಂಬರ್ 8 ರಿಂದ ಮುಂದಿನ ಮೂರು ತಿಂಗಳವರೆಗೆ ಆಯೋಜಿಸಲು ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶಿಸಿದೆ.
ಹೈನುಗಾರಿಕೆ, ಕುರಿ-ಮೇಕೆ, ಹಂದಿ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಿರುವ ಜಿಲ್ಲೆಯಲ್ಲಿನ ರೈತರು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಗೆ ಭೇಟಿ ನೀಡಿ, ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ, ದುಡಿಮೆ ಬಂಡವಾಳಕ್ಕೆ ಆರ್ಥಿಕ ನೆರವು ಪಡೆಯಬಹುದಾಗಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗಿನ ಸಾಲದ ಮೊತ್ತಕ್ಕೆ ಶೇ. 2ರಷ್ಟು ಬಡ್ಡಿ ಸಹಾಯಧನ ಲಭ್ಯವಿದೆ. ಅಲ್ಲದೇ ಸಕಾಲದಲ್ಲಿ ಈ ಸಾಲವನ್ನು ಮರುಪಾವತಿ ಮಾಡಿದ್ದಲ್ಲಿ, ವಾರ್ಷಿಕ ಶೇ. 3ರಷ್ಟು ಹೆಚ್ಚುವರಿ ಬಡ್ಡಿ ಸಹಾಯಧನದ ಸೌಲಭ್ಯವನ್ನು ಸಹ ಪಡೆಯಬಹುದಾಗಿದ್ದು, ಆಸಕ್ತ ರೈತರು ತಮ್ಮ ಅವಶ್ಯಕತೆಗನುಗುಣವಾಗಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯಾ ತಾಲ್ಲೂಕಿನ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…