ದೊಡ್ಡಬಳ್ಳಾಪುರ: ಟಿಎಂಸಿ ಬ್ಯಾಂಕ್ ವಾರ್ಷಿಕೋತ್ಸವ ಹಾಗೂ ಸಭಾ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ ಗಾಂಧಿನಗರದ ಟೆಕ್ಸ್‍ಟೈಲ್ ಮ್ಯಾನುಫ್ಯಾಕ್ಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಲಿ.,ನ 58ನೇ ವಾರ್ಷಿಕೋತ್ಸವ ಹಾಗೂ ಬ್ಯಾಂಕ್‍ನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಸಿ.ಪುಟ್ಟಯ್ಯ ಸಭಾ ಭವನ ಹಾಗೂ ಆಡಳಿತ ಮಂಡಲಿ ಕಚೇರಿಯ ಉದ್ಘಾಟನೆ ಶುಕ್ರವಾರ ನಡೆಯಿತು.

ಬ್ಯಾಂಕ್‍ನ ಅಧ್ಯಕ್ಷ ಕೆ.ಪಿ.ವಾಸುದೇವ್ ಮಾತನಾಡಿ, ಬ್ಯಾಂಕ್‍ನ ನಿಧಿಯಿಂದ ಯಾವುದೇ ಹಣ ತೆರೆಯದೇ 12 ವರ್ಷದಿಂದ ಕ್ರೋಢೀಕರಿಸಿದ ಬ್ಯಾಂಕ್ ಕಟ್ಟಡ ನಿಧಿಯಿಂದ ನೂತನ ಕಟ್ಟಡಗಳನ್ನು ನಿರ್ಮಿಸಲಾಗಿದೆ. ನೇಕಾರರಿಗೆ ನೆರವಾಗುವ ನಿಟ್ಟಿನಲ್ಲಿ ಆರಂಭವಾಗಿರುವ ಟಿಎಂಸಿ ಬ್ಯಾಂಕ್ ನೇಕಾರರು, ಸಣ್ಣ ಉದ್ಯಮಿಗಳೂ ಸೇರಿದಂತೆ ವಿವಿಧ ವರ್ಗಗಳ ಆರ್ಥಿಕ ಸಬಲೀಕರಣಕ್ಕೆ ನೆರವಾಗುತ್ತಿದೆ. ಟಿಎಂಸಿ ಬ್ಯಾಂಕ್ ಮಾರ್ಚ್ 2020ರ ಅಂತ್ಯಕ್ಕೆ 20.44 ಲಕ್ಷ ರೂಗಳ ನಿವ್ಹಳ ಲಾಭ ಗಳಿಸಿದೆ. ಬ್ಯಾಂಕ್ ಅಭಿವೃದ್ದಿ ಹೊಂದುತ್ತಿದೆ. ಆದರೆ ಮಾರ್ಚ್ 2020ರ ನಂತರ ಕೋವಿಡ್ ಕಾರಣದಿಂದಾಗಿ ಬ್ಯಾಂಕ್‍ನ ವಹಿವಾಟಿನಲ್ಲಿ ಕುಸಿತ ಕಂಡಿದೆ. ಬ್ಯಾಂಕ್‍ನಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆರೋಗ್ಯ ಶಿಬಿರಗಳಂತಹ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ಕೋವಿಡ್ ನಿಂದ ಸ್ಥಗಿತಗೊಂಡಿದೆ. ಸದಸ್ಯರ ಕೋರಿಕೆಯ ಮೇರೆಗೆ ಶೇ.10ರಷ್ಟು ಡಿವಿಡೆಂಡ್ ನೀಡಲಾಗುತ್ತಿದೆ. ಬ್ಯಾಂಕ್‍ನಲ್ಲಿ ರಾಜ್ಯ ಸರ್ಕಾರದ ಸಾಲ ಮನ್ನಾ ಯೋಜನೆಯಡಿ 207 ನೇಕಾರರ ಸಾಲ ಮನ್ನಾ ಮಾಡಲಾಗಿದೆ. ಆ.1ರಿಂದ ಚೆಕ್ ಕ್ಲಿಯರಿಂಗ್ ಹಾಗೂ ಆರ್‍ಟಿಜಿಎಸ್ ಸೌಲಭ್ಯ ವರ್ಷದ 365 ದಿನಗಳ ಚಾಲ್ತಿಯಲ್ಲಿದೆ. ಸದಸ್ಯರು ಹೆಚ್ಚಿನ ಹಣವನ್ನು ಬ್ಯಾಂಕ್‍ನ ವಹಿವಾಟುಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬ್ಯಾಂಕ್ ಮತ್ತಷ್ಟು ಏಳಿಗೆಯಾಗುವಂತೆ ಸಹಕರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಜಿ.ಮಂಜುನಾಥ್, ಪ್ರಭಾರಿ ವ್ಯವಸ್ಥಾಪಕರಾದ ಎ.ಎಸ್.ಪುಷ್ಪಲತಾ, ನಿರ್ದೇಶಕರಾದ ಎ.ಆರ್.ಶಿವಕುಮಾರ್, ಪಿ.ಸಿ.ವೆಂಕಟೇಶ್, ಎ.ಎಸ್.ಕೇಶವ, ಕೆ.ಜಿ.ಗೋಪಾಲ್, ಡಿ.ಪ್ರಶಾಂತ್ ಕುಮಾರ್, ನಾರಾಯಣ್.ಎನ್.ನಾಯ್ಡು, ಬಿ.ಆರ್.ಉಮಾಕಾಂತ್, ಎ.ಗಿರಿಜಾ, ಡಾ.ಆರ್.ಇಂದಿರಾ, ವೃತ್ತಿಪರ ನಿರ್ದೇಶಕರಾದ ಕೆ.ಎಂ.ಕೃಷ್ಣಮೂರ್ತಿ, ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್ ಗಾಂಧಿ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್

ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇನೆ, ಮೋದಿ ಮೇಲೆ ಟ್ರಂಪ್ ಒತ್ತಡವಿದ್ದು, ಇವರು ಒಪ್ಪಂದವನ್ನು ರದ್ದು ಮಾಡಲು ಸಾಧ್ಯವಿಲ್ಲ. ಎಫ್ಸ್ಟೀನ್ ಫೈಲ್ ದಮ್ಕಿ ಮಾಡುತ್ತಿದ್ದಾರೆ. ಅಲ್ಲದೆ ಅದಾನಿಯ ಕ್ರಿಮಿನಲ್ ಕೇಸ್ ಇವರ ತಲೆಯ ಮೇಲೆ ಕುಳಿತಿದೆ: ರಾಹುಲ್

[ccc_my_favorite_select_button post_id="119731"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!