ದೊಡ್ಡಬೆಳವಂಗಲದಲ್ಲಿ ಬಸ್ ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ: ಬಸ್‌ಗಳ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ದೊಡ್ಡಬಳ್ಳಾಪುರ: ಕೋವಿಡ್ ನಂತರ ಆರಂಭವಾದ ಶಾಲೆ, ಕಾಲೇಜುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಪದೇ ಪದೇ ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ತಾಲೂಕಿನಲ್ಲಿ ಸೃಷ್ಟಿಯಾಗಿದೆ.

ಇತ್ತೀಚೆಗಷ್ಟೇ ಜಿ.ಹೊಸಹಳ್ಳಿ ಮಾರ್ಗದ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿರುವ ಬೆನ್ನಲ್ಲೆ‌. ಶಾಲೆ ಕಾಲೇಜು ಅವಧಿಗೆ ಹೆಚ್ಚುವರಿ ಬಸ್ ಸಂರ್ಪಕವಿಲ್ಲದೆ‌, ಬಸ್​ ಬಾಗಿಲಲ್ಲಿ ನೇತಾಡಿಕೊಂಡು ಪ್ರಯಾಣಿಸ ಬೇಕಾದ ಅನಿವಾರ್ಯತೆ ವೇಳೆ ವಿದ್ಯಾರ್ಥಿನಿಯೊಬ್ಬರು ಆಯತಪ್ಪಿ ಬಿದ್ದಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಇಂದು ಸಂಭವಿಸಿದೆ.

ಗಾಯಗೊಂಡ ಯುವತಿಯನ್ನು ಶ್ರೀವಾಣಿ ಕಾಲೇಜಿನ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಮಾದ ಸಂಭವಿಸಿಲ್ಲ.

ಈ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಇಲ್ಲದೆ ಇರುವುದೇ ಈ ಘಟನೆಗೆ ಕಾರಣವೆಂದು ಆರೋಪಿಸಿದ ವಿದ್ಯಾರ್ಥಿಗಳು, ಬಸ್ ನಿಲ್ದಾದಲ್ಲೆ ಸಾರಿಗೆ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಪದೇ ಪದೇ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದರು ಅಧಿಕಾರಿಗಳು ಸ್ಪಂದಿಸುತ್ತಿಲ್ಲ‌. ಬಸ್ ನಿಲುಗಡೆ ಮಾಡದೆ ಚಾಲಕರು ಬೇಜವಬ್ದಾರಿಯಿಂದ ವರ್ತಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ವಿಳಂಭವಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಬಸ್ ಗಳನ್ನು ಸಮರ್ಪಕವಾಗಿ ನಿಲ್ಲಿಸಿದೆ ನಿಧಾನಗತಿಯಲ್ಲಿ ಓಡಿಸುತ್ತಿದ್ದು, ಆಯತಪ್ಪಿ ಬೀಳುವಂತಾಗಿದೆ ಎಂದು ಆರೋಪಿಸಿದರು.

ವಿಷಯ ತಿಳಿದ ಡಿಪೋ ವ್ಯವಸ್ಥಾಪಕರು ಮತ್ತೊಂದು ಬಸ್ ಕಳುಹಿಸಿದರು. ನಿರಂತರವಾಗಿ ಹೆಚ್ಚುವರಿ ಬಸ್ ಬರದಿದ್ದರೆ ಮತ್ತೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ಕಾಲೇಜಿಗೆ ತೆರಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

[ccc_my_favorite_select_button post_id="119969"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ***** ಬಳಿ ಸಂಭವಿಸಿದೆ

[ccc_my_favorite_select_button post_id="119977"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!