ಬೆಂ.ಗ್ರಾ.ಜಿಲ್ಲೆ: 2021-22ನೇ ಸಾಲಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜಾರಿಯಲ್ಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಶಾಲಾ/ ಕಾಲೇಜು/ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರು ಅಥವಾ ಸಂಸ್ಥೆಯ ನೋಡಲ್ ಅಧಿಕಾರಿಗಳು ತಮ್ಮ ಆಧಾರ್ ದೃಢೀಕರಣ ಕಡ್ಡಾಯವಾಗಿ ಮಾಡಿಕೊಂಡು ವಿದ್ಯಾರ್ಥಿಗಳ ಅರ್ಜಿಗಳನ್ನು ಆನ್‌ಲೈನ್ ಮೂಲಕ ಪರಿಶೀಲನೆ ಮಾಡುವುದು.
ಈ ಅರ್ಜಿಗಳನ್ನು ಶಾಲಾ/ ಕಾಲೇಜು/ ಶಿಕ್ಷಣ ಸಂಸ್ಥೆಗಳ ಹಂತದಲ್ಲಿ ಪರಿಶೀಲಿಸಲು ಎಲ್ಲಾ ಶಾಲಾ/ಕಾಲೇಜು/ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರು/ ಪ್ರಾಂಶುಪಾಲರುಗಳು ಅಥವಾ ಅವರಿಂದ ನೇಮಿಸಲ್ಪಟ್ಟ ಸಂಸ್ಥೆಯ ನೋಡಲ್ ಅಧಿಕಾರಿಗಳು ತಮ್ಮ ಆಧಾರ್ ದೃಢೀಕರಣ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಅದರಂತೆ ಆಧಾರ್ ದೃಢೀಕರಣಗೆ ಸಂಬಂಧಿಸಿದ ಯೂಸರ್ ಮ್ಯಾನ್ಯುವಲ್‌ಅನ್ನು https://scholarships.gov.in ಮತ್ತು ಇಲಾಖೆಯ ಜಾಲತಾಣ https://dom.karnataka.gov.in/ ದಲ್ಲಿ ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ದೂ.ಸಂ.: 080-29787455, ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೆÉÃರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ರೂಬಿ ಲೇಔಟ್, ಮಾಲ್ಲೂರು ರಸ್ತೆ, ಹೊಸಕೋಟೆ ಟೌನ್-562114. ದೂ.ಸಂ.: 080-27931899, ವಿಸ್ತರಣಾಧಿಕಾರಿಗಳು ಮೊ.ಸಂ.: 8310397004, ಡಿ.ಇ.ಓ ಮೊ.ಸಂ.: 7676905779, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ವಿಜಯಪುರ, ದೇವನಹಳ್ಳಿ ತಾಲ್ಲೂಕು, ದೂ.ಸಂ.: 080-27682882, ಡಿ.ಇ.ಓ ಮೊ.ಸಂ.: 9108360071, ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ಜಾಮೀಯಾ ಮಸೀದಿ, ಕುಂಬಾರಪೇಟೆ, ಕೋರ್ಟ್ ರೋಡ್, ದೊಡ್ಡಬಳ್ಳಾಪುರ ಟೌನ್ ದೂ.ಸಂ.: 080-27627444, ವಿಸ್ತರಣಾಧಿಕಾರಿಗಳು ಮೊ.ಸಂ.: 9686574866, ಡಿ.ಇ.ಓ ಮೊ.ಸಂ.: 9986874875, ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯಲಯ, ಟಿ.ಬಿ.ಬಸ್ ಸ್ಟಾಪ್ ಹತ್ತಿರ, ಸುಭಾಶ್ ನಗರ, ನೆಲಮಂಗಲ ಟೌನ್, ದೂ.ಸಂ.: 080-27725445, ವಿಸ್ತರಣಾಧಿಕಾರಿಗಳು ಮೊ.ಸ.: 9686574866, ಡಿ.ಇ.ಓ ಮೊ.ಸಂ.: 7026703939 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳಾದ ಮೈಲೇರಪ್ಪ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….