ದೊಡ್ಡಬಳ್ಳಾಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಬೃಹತ್ ಕಾನೂನು ಕಾರ್ಯಾಗಾರ ಮತ್ತು ಕಾನೂನು ಪುಸ್ತಕಗಳ ಪ್ರದರ್ಶನ -2021 ಕಾರ್ಯಕ್ರಮ ನಗರದ ಬಾಬು ಜಗಜೀವನ ರಾಮ್ ಸಭಾ ಭವನದಲ್ಲಿ ನ.13ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ತ್ಯಾಗರಾಜ್ ಎನ್.ಇನವಳ್ಳಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎ.ಹರೀಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಅರವಿಂದ ಸಾಯಿಬಣ್ಣ ಹಾಗರಗಿ, ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಂ ಬೈರೇಗೌಡ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……