ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ವೈದ್ಯಕೀಯ ಘಟಕ, ಅಭಿಷೇಕ್ ನೇತ್ರಧಾಮದ ಸಹಯೋಗದಲ್ಲಿ ಆರೋಗ್ಯ ತಪಾಸಣ ಹಾಗೂ ನೇತ್ರ ತಪಾಸಣಾ ಶಿಬಿರ ನ.14ರಂದು ಬೆಳಿಗ್ಗೆ 10 ಗಂಟೆಯಿಂದ ತಾಲೂಕಿನ ರಾಜಘಟ್ಟದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯಲಿದೆ.
ಚಿತ್ರನಟ ಗರುಡ ರಾಮ್ ಶಿಬಿರವನ್ನು ಉದ್ಘಾಟಿಸಲಿದ್ದಾರೆ ಎಂದು ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ತಿಳಿಸಿದ್ದಾರೆ.
ರಕ್ತದಾನ ಶಿಬಿರ: ನಗರದ ಬಸ್ ನಿಲ್ದಾಣದ ವೀರಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಆಟೋ ಚಾಲಕರಿಂದ 66ನೇ ಕನ್ನಡ ರಾಜ್ಯೋತ್ಸವ ಹಾಗೂ ನಟ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ ನ.14ರಂದು ಬೆಳಿಗ್ಗೆ 10ಗಂಟೆಯಿಂದ ಬಸ್ ನಿಲ್ದಾಣದ ಸಮೀಪದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……