ದೊಡ್ಡಬಳ್ಳಾಪುರ: ನಗರದ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಸಂಕ್ರಾಮಿಕ ರೋಗ ನಿಯಂತ್ರಣ ಘಟಕದ ಡಾ.ವೆಂಕಟೇಶ್, ಆರೋಗ್ಯ ರಕ್ಷಣೆಗಾಗಿ ವಿಶ್ವದಾದ್ಯಂತ ಖರ್ಚು ಮಾಡುತ್ತಿರುವ ಹಣದಲ್ಲಿ ಒಂದು ಪಾಲನ್ನು ಮಧುಮೇಹ ಕಾಯಿಲೆ ನಿರ್ವಹಣೆಗಾಗಿಯೇ ವ್ಯಯಿಸಲಾಗುತ್ತಿದೆ. ಈ ಅಂಶವನ್ನು ಗಮನಿಸಿದಾಗ, ಈ ಕಾಯಿಲೆಯು ಎಷ್ಟರಮಟ್ಟಿಗೆ ವ್ಯಾಪಿಸಿದೆ ಎಂಬುದನ್ನು ಸೂಚಿಸುತ್ತದೆ. ಜಾಗತಿಕ ಅಭಿವೃದ್ಧಿಗೂ ತೊಡಕಾಗಲು ಕಾರಣವಾಗಿರುವ ಈ ರೋಗವನ್ನು ನಿಯಂತ್ರಿಸಲು ಹಾಗೂ ನಿರ್ವಹಣೆ ಮಾಡಲು ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ’ ಎಂದರು.
ಜೀವನಶೈಲಿ ಬದಲಿಸಿಕೊಂಡು, ನಿಯಮಿತ ಆಹಾರಪದ್ಧತಿ ಹಾಗೂ ವ್ಯಾಯಾಮದಂತಹ ದೈಹಿಕ ಚಟುವಟಿಕೆಗಳನ್ನು ಶಿಸ್ತಾಗಿ ಪಾಲಿಸುವ ಮೂಲಕ ದೇಹದಲ್ಲಿನ ಸಕ್ಕರೆ ಅಂಶದ ಪ್ರಮಾಣ, ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಅಂಶಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಈ ವೇಳೆ ವೈದ್ಯಾಧಿಕಾರಿಗಳಾದ ಡಾ.ವಿಜಯಲಕ್ಷ್ಮಿ, ಡಾ.ಪಾರ್ಥಸಾರಥಿ, ಡಾ.ಮಂಜುನಾಥ್, ಎನ್ ಸಿಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……