ರೈತರೊಂದಿಗೊಂದು ದಿನ: ಶಿಳ್ಳೆ ಚಪ್ಪಾಳೆ ಇದ್ದರೇನೇ ಬದುಕು: ಬಿ.ಸಿ.ಪಾಟೀಲ್

ಹಾವೇರಿ: ಶಿಳ್ಳೆ‌,ಚಪ್ಪಾಳೆ ಇದ್ದರೆನೇ ಕಲಾವಿದರ ಜೀವನ.ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ನೋಡುವ ಮೂಲಕ ಚಿತ್ರರಂಗವನ್ನು ಕಲಾವಿದರನ್ನು ಜನರು ಬೆಳೆಸಬೇಕು ಎಂದು ಚಲನಚಿತ್ರ ನಟರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹಿರೇಕೆರೂರಿ ತಾಲೂಕಿನಲ್ಲಿ ನಡೆದ ರೈತರೊಂದಿಗೊಂದು ದಿನ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಛಲದೋಳ್ ದುರ್ಯೋಧನ. ನಾನು ಆಧುನಿಕ ಕೌರವನ ಪಾತ್ರ ಮಾಡಿದ್ದೆ.ಪೌರಾಣಿಕ ಕೌರವ ಧುರ್ಯೋಧನನಾಗಿದ್ದು ನಟ ದರ್ಶನ್‌. ಬಹಳ ವರ್ಷ ನಾನು ಸಿನಿಮ ಮಾಡಿರಲಿಲ್ಲ. ಯಶಸ್ ಸೂರ್ಯ ನಟನನ್ನು ಪರಿಚಯಿಸಿ ಚಿತ್ರರಂಗದಲ್ಲಿ ಬೆಳೆಸುವ ದೃಷ್ಟಿಯಿಂದ ದರ್ಶನ್ ಅವರ ಸ್ಫೂರ್ತಿ ಡಿ ಬಾಸ್ ಶಕ್ತಿಯಿಂದ ಮುಂದಾಗಿದ್ದೇವೆ. ಅದರಂತೆ ಗರಡಿ ಚಿತ್ರ ನಿರ್ಮಾಣವಾಗುತ್ತಿದೆ ಎಂದರು.

ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಮೆಚ್ಚಿ ಹಿರೇಕೆರೂರೊಗೆ ಬಂದಿದ್ದಾರೆ.ಯಾವುದೇ ಗಾಡ್ ಫಾದರ್ ಇಲ್ಲದೇ ಬೆಳೆದವರು ನಟ ದರ್ಶನ್‌ಗೆ ರಾಜ್ಯದ ಜನತೆಯೇ ಅಭಿಮಾನಿಗಳು.ಗಾಡ್ ಫಾದರ್. ದುರ್ಗಾದೇವಿ ಪಾದಾರವಿಂದಗಳಿಗೆ ನಮಸ್ಕರಿಸೋ ಮೂಲಕ ಗರಡಿ ಚಿತ್ರಕ್ಕೆ ಕ್ಲ್ಯಾಪಿಂಗ್ ಮಾಡಿದ್ದೇವೆ. ಡಿ ಬಾಸ್ ಎಂದರೆನೇ ದರ್ಶನ್. ಶಿಳ್ಳೆ ಚಪ್ಪಾಳೆ ಇದ್ದರೆನೇ ಜೀವ. ಜನತೆ ನನ್ನನ್ನು ಶಾಸಕರನ್ನಾಗಿ ಮಾಡಿ ಕೃಷಿಕರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ರಾಜ್ಯದ ರೈತರ ಹಿತ ಕಾಯಲು ಕೃಷಿ ಅಭಿಮಾನಿ ರೈತನೂ ಆಗಿರುವುದರಿಂದ ರೈತರ ಮೇಲಿನ ಅಭಿಮಾನದಿಂದ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ.ಇದೇ ಪ್ರೀತಿಯಿಂದ ಹಿರೇಕೆರೂರಿನಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ಬಿಸಿಪಿ ಹೇಳಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತನಾಡಿ,ಪೊಲೀಸನಾಗಿ, ನಟ,ನಿರ್ಮಾಪಕನಾಗಿ ನಂತರ ಇದೀಗ ಸಚಿವನಾಗುವುದು ಬಹಳ ಸುಲಭದ ಕೆಲಸವಲ್ಲ. ಏನೇ ಕೆಲಸವಾಗಲೀ ಅದನ್ನು ಗುರಿಯಿಟ್ಟು ಮಾಡಿದರೆ ಯಶಸ್ಸು ಕಟ್ಟಿಟ್ಟಬುತ್ತಿ. ಇದಕ್ಕೆ ಬಿ.ಸಿ.ಪಾಟೀಲರೇ ಸಾಕ್ಷಿ. ಬಿ.ಸಿ.ಪಾಟೀಲರನ್ನು ನಾನು ಪ್ರೀತಿಯಿಂದ ಕಾಕವರೇ ಎನ್ನುತ್ತೇನೆ.ರೈತರು ಪ್ರೀತಿಯಿಂದ ಬಹಳ ಕಷ್ಟಪಟ್ಟು ಬೆಳೆ ಬೆಳಯುತ್ತಾರೆ.ರೈತರು ಮತ್ತು ಸೈನಿಕರು ದೇಶದ ಬೆನ್ನೆಲಬು.ಭೂಮಿತಾಯಿಯನ್ನು ನಂಬಿ ಕಷ್ಟಪಟ್ಟು ದುಡಿಯುತ್ತಾನೆ.ರೈತ ತಂತ್ರಜ್ಞಾನ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಫಸಲು ಬೆಳೆದಲ್ಲಿ ತಮ್ಮ ಆದಾಯ ದ್ವಿಗುಣಗೊಳಿಸಬಹುದು ಎಂದು ಕರೆ ನೀಡಿದರು.

ಕಲಾವಿದರ ದೇಹ ಇರುವುದು ಅಭಿಮಾನಿಗಳಿಂದ.ಕಲಾವಿದರು ಪ್ರೀತಿ ಪ್ರೋತ್ಸಾಹದಿಂದ ಬೆಳೆಯುತ್ತಾರೆ. ನಿರ್ದೇಶಕ ಯೋಗರಾಜ್ ಭಟ್ ಗರಡಿ ಚಿತ್ರ ನಿರ್ದೇಶಿಸುತ್ತಿದ್ದಾರೆ.ಯಶಸ್ ಸೂರ್ಯ ನಮ್ಮ ಹಿರೋ.ಯಶಸ್ ಸೂರ್ಯ ಸೇರಿದಂತೆ ಎಲ್ಲಾ ಕಲಾವಿದರ ಮೇಲೆ ಅಭಿಮಾನ ಪ್ರೀತಿಯಿರಲಿ ಎಂದು ದರ್ಶನ್ ಮನವಿ ಮಾಡಿದರು.

ರೈತಗೀತೆಯೊಂದಿಗೆ ವೇದಿಕೆ ಕಾರ್ಯಕ್ರಮಕ್ಕೆ ದೀಪಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.ಇತ್ತೀಚೆಗೆ ಅಗಲಿದ ಚಿತ್ರನಟ ದಿ.ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೃಷಿ ಸಚಿವ ಬಿ.ಸಿ.ಪಾಟೀಲ್ ವೇದಿಕೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನವನ್ನು ರೈತರ ಹೆಸರಿನಲ್ಲಿ ಸಾರ್ವಜನಿಕವಾಗಿ ಆಚರಿಸಿಕೊಂಡರು.

ದರ್ಶನ್ ಅಭಿಮಾನಿಗಳಿಂದ ಬಿ.ಸಿ.ಪಾಟೀಲರು ಹಾಗೂ ದರ್ಶನ್‌ರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ನಿರ್ದೆಶಕ ಯೋಗರಾಜ್ ಭಟ್ ಅವರಿಂದ ವೇದಿಕೆಯಲ್ಲಿ ಸೌಮ್ಯ ಬ್ಯಾನರ್ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಗರಡಿ ಚಲನಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ,ಈ ಚಲನಚಿತ್ರದ ಹಿಂದೆ ಆಲದ ಮರದ ತರಹ ನಿಂತವರು ನಟ ದರ್ಶನ್ ನೂತನ ಯಶಸ್ ಸೂರ್ಯರಂತವರನ್ನು ಕೈಹಿಡಿದು ನಡೆಸಬೇಕಾಗಿದೆ ಎಂದರು.

ಪ್ರಾಸ್ತಾವಿಕವಾಗಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಮಾತನಾಡಿದರು.

ವೇದಿಕೆಯಲ್ಲಿ ನಿರ್ದೇಶಕ ಯೋಗರಾಜ್‌‌ಭಟ್, ನಟ ಶ್ರೇಯಸ್ ಸೂರ್ಯ, ಬಿಜೆಪಿ ಯುವನಾಯಕಿ ಸೃಷ್ಟಿಪಾಟೀಲ್, ದೊಡ್ಡಗೌಡಪಾಟೀಲ್, ಗುರುಶಾಂತ್ ಯತ್ನಾಳ್, ಸಿದ್ದರಾಜ್ ಕಲ್ಬಡ್ಡಿ ಸೇರಿದಂತೆ ಮತ್ತಿತ್ತರು ಪ್ರಮುಖರು ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]