ದೊಡ್ಡಬಳ್ಳಾಪುರ: ಮಕ್ಕಳ ದಿನಾಚರಣೆ ಅಂಗವಾಗಿ ತಾಲೂಕಿನ ಆರೂಢಿ ಗ್ರಾಮದ ಅಂಗನವಾಡಿ 2ರಲ್ಲಿ ಮಕ್ಕಳ ದಿನಾಚರಣೆ ಮತ್ತು ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ 45ಕ್ಕು ಹೆಚ್ಚು ಮಕ್ಕಳು ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಎಲ್ಲರಿಗೂ ಪ್ರಶಸ್ತಿ ವಿತರಿಸಿ ಪ್ರೋತ್ಸಾಹಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಸದಸ್ಯರಾದ ತಿಪ್ಪರಾಜು, ನವೀನ್, ರಾಧ, ಗಂಗರಾಜಮ್ಮ, ಮುಖಂಡರಾದ ಎಚ್.ನರಸೀಯಪ್ಪ, ಕೆಂಪಲಿಂಗಣ್ಣ, ಮಹೇಶ್, ಅಂಗನವಾಡಿ ಕಾರ್ಯಕರ್ತೆ ಶಕುಂತಲಮ್ಮ, ಸಹಾಯಕಿ ಗೋವಿಂದಮ್ಮ ಸೇರಿದಂತೆ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಹಾಗೂ ಪೋಷಕರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……